ಬೆಳಗಾವಿ: PSI ಹಗರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
Advertisement
ಇಲ್ಲಿನ ಗೋಕಾಕ್ ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ಹಗರಣದಲ್ಲಿ ಸಚಿವರು, ಶಾಸಕರ ಹೆಸರು ಕೇಳಿಬಂದಿದೆ. ನೆನ್ನೆಯಷ್ಟೇ ಮಾಜಿ ಸಿಎಂ ಪುತ್ರನ ಹೆಸರೂ ಕೇಳಿ ಬಂದಿದೆ. ಪೊಲೀಸರೂ ಭಾಗಿಯಾಗಿರುವ ಈ ಪ್ರಕರಣದಲ್ಲಿ ಸರ್ಕಾರ ಪೊಲೀಸರಿಂದಲೇ ತನಿಖೆ ನಡೆಸುವುದು ಎಷ್ಟರಮಟ್ಟಿಗೆ ಸೂಕ್ತ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣಗೂ PSI ಅಕ್ರಮಕ್ಕೂ ಸಂಬಂಧವಿಲ್ಲ: ಮುನಿರತ್ನ
Advertisement
ಒಂದೇ ಕೇಂದ್ರದಲ್ಲಿ ಪರಿಕ್ಷೆ ಬರೆದ ಅತಿಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗಾಗಲೇ ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದು ಬಯಲಾಗಿದೆ. ಇದೆಲ್ಲವನ್ನು ಪ್ರಾಮಾಣಿಕವಾಗಿ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಸೂಕ್ತ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Advertisement
Advertisement
ಇದೇ ವೇಳೆ ದಿವ್ಯಾ ಹಾಗರಗಿಯನ್ನು ಕಾಂಗ್ರೆಸ್‌ನವರು ಮುಚ್ಚಿಡಲು ಆಕೆ ಸಣ್ಣ ಮಗು ಅಲ್ಲ. ಬಿಜೆಪಿ ಪಕ್ಷದಲ್ಲಿ ಉನ್ನತ ಹುದ್ದೆಯಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮರಾಠಾ ಸಮುದಾಯದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ಬೇಕು: ಅನಿಲ್ ಬೆನಕೆ
ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೇ 7, 8ರಂದು ಬೆಳಗಾವಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾನೂ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.
ಇದರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇ 7ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿ ನಗರ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದಿಂದ ಚುನಾವಣೆ ಕುರಿತು ಸಭೆ ನಡೆಸಲಿದ್ದಾರೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.