ಕಲಬುರಗಿ: ಪೊಲೀಸ್ ಸಬ್ ಇನ್ಸಪೆಕ್ಟರ್ (CBI) ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ (Kalaburagi) ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ.
ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಸಾವನ್ನಪ್ಪಿದ ದುರ್ದೈವಿ. ಇದನ್ನೂ ಓದಿ: Dharmasthala Case | ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್ ರಾಜ್
2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜೂ.16) ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.
ಪಿಎಸ್‌ಐ ಬಸವರಾಜ್ ಅವರಿಂದ ಕರೆ ಬರುತ್ತಿದ್ದಂತೆ ಆತಂಕಗೊಂಡ ಸ್ನೇಹಿತರು ತಕ್ಷಣವೇ ಅವರ ತಂದೆಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಗಾಬರಿಗೊಂಡ ತಂದೆ ತಕ್ಷಣವೇ ಮಗನ ರೂಮಿನ ಬಳಿ ಧಾವಿಸಿ, ಒಳಗಿನಿಂದ ಲಾಕ್ ಆಗಿದ್ದ ಬಾಗಿಲನ್ನು ಒಡೆದು ತೆರೆದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸವರಾಜ್ ಸೀರೆಯಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಭೀಕರ ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಕುರಿತು ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.ಇದನ್ನೂ ಓದಿ: ಭವಾನಿ ಕೊಲೆ ಪ್ರಕರಣ – ವಿಷ ಕುಡಿದಂತೆ ನಾಟಕ, ಮೃತದೇಹ ತಬ್ಬಿಕೊಂಡು ಮಲಗಿದ್ದ ಆರೋಪಿ ಚಂದ್ರು
