ಬೆಂಗಳೂರು: ಯುಪಿಎಸ್‌ಸಿ (UPSC) ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ 402 ಪಿಎಸ್‌ಐ (PSI) ಹುದ್ದೆಗಳ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ. ಅ.3 ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ದಿನಾಂಕ ನಿಗದಿ ಮಾಡಿದೆ. ಬೆಳಗ್ಗೆ 10:30 ರಿಂದ 12:00 ರ ವೆರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12:30 ರಿಂದ 02:00 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದು ಕೆಇಎ (KEA) ತಿಳಿಸಿದೆ.ಇದನ್ನೂ ಓದಿ: ದರ್ಶನ್ & ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ – ಇನ್ನೂ 14 ದಿನ ಜೈಲೇ ಗತಿ
Advertisement
ಪಿಎಸ್‌ಐ ಪರೀಕ್ಷೆ ಜೊತೆಗೆ ವಿವಿಧ ಇಲಾಖೆಗಳ ಪರೀಕ್ಷೆಗಳಿಗೂ ಪರಿಷ್ಕೃತ ವೇಳಾಪಟ್ಟಿಯನ್ನು ಕೆಇಎ ಪ್ರಕಟ ಮಾಡಿದೆ. ಗ್ರಾಮ ಆಡಳಿತಾಧಿಕಾರಿಗಳು ಮತ್ತು ಜಿಟಿಟಿಸಿಯ (GTTC) ವಿವಿಧ ಹುದ್ದೆಗಳಿಗೆ ಸೆ.29 ಮತ್ತು ಅ.26 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅ.7ರಂದು ಪರೀಕ್ಷೆ ನಡೆಯಲಿದೆ.
Advertisement
Advertisement
ಕೆ-ಸೆಟ್ (K-Set) ಪರೀಕ್ಷೆ ಸೇರಿದಂತೆ ರಾಯಚೂರು ವಿವಿ (Raichuru) ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನ.24 ರಂದು ಪರೀಕ್ಷೆಗಳು ನಡೆಯಲಿವೆ ಎಂದು ಕೆಇಎ ಮಾಹಿತಿ ನೀಡಿದೆ.ಇದನ್ನೂ ಓದಿ: ಟೊಮೆಟೋ ಬೆಳೆ ಲಾಸ್: ಸಾಲ ತೀರಿಸಲು ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದ ಟೆಕ್ಕಿ ಅರೆಸ್ಟ್