DistrictsKalaburagiKarnatakaLatestMain Post

ಪಿಎಸ್‌ಐ ಅಕ್ರಮ- ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದು ನಾಪತ್ತೆಯಾಗಿದ್ದಾಕೆ ಕೊನೆಗೂ ಲಾಕ್

ಕಲಬುರಗಿ: ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ಆರೋಪದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಮೂಲದ ರಚನಾ ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದಳು. ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ಆಕೆ ನಾಪತ್ತೆಯಾಗಿದ್ದಳು. ಬೆಂಗಳೂರು ಸಿಐಡಿ ಅಧಿಕಾರಿಗಳು ಎಷ್ಟೇ ಹುಡುಕಾಟ ನಡೆಸಿದರೂ ಆಕೆ ಅವರ ಕೈಗೆ ಸಿಕ್ಕಿರಲಿಲ್ಲ. ಇದನ್ನೂ ಓದಿ: ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

 

ಮಹಾರಾಷ್ಟ್ರದ ಗಡಿಯಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕಿಲಾಡಿ ರಚನಾ ಇದೀಗ ಹಿರೋಳಿ ಚೆಕ್‌ಪೋಸ್ಟ್ ಬಳಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾಳೆ. ಕಳೆದ ಒಂದೂವರೆ ತಿಂಗಳಿನಿಂದ ಕಲಬುರಗಿ ಸಿಐಡಿ ಅಧಿಕಾರಿಗಳು ಫಾಲೋಅಪ್ ಮಾಡಿದ್ದು, ನಿನ್ನೆ ಸಂಜೆ ಅಧಿಕಾರಿಗಳ ಕೈಯಲ್ಲಿ ರಚನಾ ಲಾಕ್ ಆಗಿದ್ದಾಳೆ.

ಸಿಐಡಿ ಅಧಿಕಾರಿಗಳು ಆಕೆಯನ್ನು ನಿನ್ನೆ ಸಂಜೆ ಬಂಧಿಸಿ ಕಲಬುರಗಿಗೆ ಕರೆತಂದಿದ್ದರು. ಇಂದು ಆಕೆಯನ್ನು ಕಲಬುರಗಿಯ 5ನೇ ಜೆಎಂಎಫ್‌ಸಿ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ಬೆಂಗಳೂರು ಸಿಐಡಿ ಟೀಂ ಇಂದು ಕಲಬುರಗಿಗೆ ತೆರಳಿದ್ದು, ರಾತ್ರಿ ವೇಳೆ ಆಕೆಯನ್ನು ಬೆಂಗಳೂರಿಗೆ ಕರೆತರಲಿದ್ದಾರೆ. ಇದನ್ನೂ ಓದಿ: ಸೂರ್ಯ ಚಂದ್ರರಿರುವ ತನಕ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಆಗಲಿದೆ: ಲಹರಿ ವೇಲು

Live Tv

Leave a Reply

Your email address will not be published.

Back to top button