ಕಲಬುರಗಿ: ಪಿಎಸ್ಐ (PSI) ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಇದೀಗ 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧರಿದ್ದೇವೆ ಎಂದು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ (Praveen Sood) ಟ್ವೀಟ್ ಮೂಲಕ ತಿಳಿಸಿದ್ದಾರೆ.
545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿದ್ದು, ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಪ್ರಕರಣ ಸಂಪೂರ್ಣ ಇತ್ಯರ್ಥವಾಗುವರೆಗೂ ನೇಮಕಾತಿ ಪ್ರಕ್ರಿಯೆ ನಡೆಸದಂತೆ ನ್ಯಾಯಾಲಯ ನಿರ್ಬಂಧ ಹೇರಿತ್ತು. ಆದರೆ, ಪಿಎಸ್ಐ ಹಗರಣ ತನಿಖೆ ಮುಗಿಯಲು ಇನ್ನೂ ವರ್ಷಗಳ ಕಾಲ ಬೇಕು. ಹೀಗಾಗಿ ನಾವು ಮರುಪರೀಕ್ಷೆ ನಡೆಸಲು ಸಿದ್ಧರಿರುವುದಾಗಿ ತಿಳಿಸಿದರು.
Advertisement
We have conducted exams for RSI (CAR/ DAR), Spl RSI KSRP and PSI KSISF (tom). We are ready to conduct re-examine for 545 PSIs but waiting for court order which has restrained us from doing so till disposal of case. Will abide by court decision.
— DGP KARNATAKA (@DgpKarnataka) January 28, 2023
Advertisement
ಮರುಪರೀಕ್ಷೆ ಬೇಗ ಆಗಬೇಕು ಎಂದು ಲಕ್ಷಾಂತರ ಅಭ್ಯರ್ಥಿಗಳು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ನಮ್ಮ ಇಲಾಖೆ ಮರು ಪರೀಕ್ಷೆ ನಡೆಸಲು ಸಿದ್ಧವಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬೇರೊಬ್ಬನ ಜೊತೆ ಮೊಬೈಲ್‍ನಲ್ಲಿ ಮಾತನಾಡಿದ್ದಕ್ಕೆ ಪ್ರಿಯತಮೆಯ ಮೇಲೆ ಶೂಟೌಟ್!
Advertisement
Advertisement
2020ರಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, 2021ರಲ್ಲಿ ದೈಹಿಕ ಮತ್ತು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಅದರಂತೆ 2022ರ ಜನವರಿ ತಿಂಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆ ರದ್ದುಪಡಿಸಿತ್ತು ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k