ಬೆಂಗಳೂರು: ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
2021ರಲ್ಲಿ ನಗರದ ಖಾಸಗಿ ಕಾಲೇಜಿನಲ್ಲಿ ಪಿಡಬ್ಲ್ಯೂಡಿ ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು. ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗುತ್ತಿದ್ದ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಒಟ್ಟು 16 ಮಂದಿಯನ್ನ ಬಂಧಿಸಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣದ ತನಿಖೆ ಮಾಡುತ್ತಿರುವ ಪೊಲೀಸರಿಗೆ ಪಿಡಬ್ಲ್ಯೂಡಿ ಪರೀಕ್ಷೆಯಲ್ಲಿ ನಡೆದ ಅಕ್ರಮದಲ್ಲಿ ಪಿಎಸ್‍ಐ ಕೇಸ್‍ನಲ್ಲಿ ಬಂಧನವಾಗಿರುವ ಆರೋಪಿ ಆರ್.ಡಿ. ಪಾಟೀಲ್ ಪಾತ್ರ ಇರುವ ಬಗ್ಗೆ ಒಂದಷ್ಟು ಅನುಮಾನಗಳು ಹಾಗೂ ಬಲ್ಲ ಮೂಲಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿರುವ ಕಾರಣ ಕಲಬುರಗಿ ಜೈಲಿನಿಂದ ಬಾಡಿವಾರೆಂಟ್ ಮೇಲೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 2-3 ದಿನದಲ್ಲಿ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ
ಸದ್ಯ ಆರೋಪಿಯನ್ನು ಒಂದನೇ ಎಸಿಎಂಎಂ ಕೋರ್ಟ್‍ಗೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ನ್ಯಾಯಾಲಯ 10 ದಿನ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಸದ್ಯ ಆರೋಪಿ ತನಿಖೆಯಿಂದ ಪಿಡಬ್ಲ್ಯೂಡಿ ನೇಮಕಾತಿ ಪರೀಕ್ಷೆಯಲ್ಲಾಗಿರುವ ಅಕ್ರಮದ ಬಗ್ಗೆ ಮತ್ತಷ್ಟು ಹುಳುಕು ಹೊರ ಬರುವ ಸಾದ್ಯತೆ ಹೆಚ್ಚಾಗಿದೆ. ಇದನ್ನೂ ಓದಿ: ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ