ಹಾಸನ: ರಾಜ್ಯದಲ್ಲೇ ಸದ್ದು ಮಾಡುತ್ತಿರುವ PSI ನೇಮಕಾತಿ ಹಗರಣ ಹಾಸನ ಜಿಲ್ಲೆಗೂ ಹಬ್ಬಿದೆ. PSI ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ, ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ಬಿಜೆಪಿಯ ಜೊತೆಯು ಉತ್ತಮ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಇದನ್ನೂ ಓದಿ: 15 ದಿನದ ಬಳಿಕ ಅಕ್ರಮ ಧ್ವನಿವರ್ಧಕಗಳ ವಿರುದ್ಧ ರಾಜ್ಯದಲ್ಲೂ ಕಾರ್ಯಾಚರಣೆ
Advertisement
ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಸಿ.ಎನ್.ಬಾಲಕೃಷ್ಣ, ಈ ಹಗರಣದಲ್ಲಿ ಎಲ್ಲರೂ ಒಂದಲ್ಲ ಒಂದು ಪಕ್ಷದಲ್ಲಿ ಗುರುತಿಸಿಕೊಂಡಿರುತ್ತಾರೆ. ಯಾವುದೇ ಪಕ್ಷ ಇಂತಹ ಕೆಲಸ ಮಾಡಿ ಅಂತ ಹೇಳಲ್ಲ. ಜನಪ್ರತಿನಿಧಿಗಳಾಗಿ ಒಳ್ಳೆಯ ಕೆಲಸ ಮಾಡಿ ಅಂತ ಹೇಳುತ್ತೆ. ಇದು ಅವರವರು ಮಾಡಿರುವಂತಹ ವೈಯಕ್ತಿಕ ತಪ್ಪುಗಳು. ತಪ್ಪು ಯಾರು ಮಾಡಿದರೂ ತಪ್ಪೇ. ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವವರಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ, ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ: ಬಿ.ಸಿ.ಪಾಟೀಲ್
Advertisement
Advertisement
ಪಿಎಸ್‌ಐ ಹಗರಣದಲ್ಲಿ ಜೆಡಿಎಸ್‌ನ ಇಬ್ಬರು ಪಕ್ಷದವರು ಭಾಗಿಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ನನಗೂ ಅದರ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಹಾಸನ ಜಿಲ್ಲೆಯ ಕೆಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಹೆಸರು ಕೇಳಿ ಬರುತ್ತಿದ್ದು ಮುಂದಿನ ದಿನಗಳಲ್ಲಿ ಇದು ಯಾರ ಕೊರಳಿಗೆ ಸುತ್ತಿಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ ಎಂದು ತಿಳಿಸಿದ್ದಾರೆ.