ಯಾದಗಿರಿ: ಪಿಎಸ್‌ಐ ಪರಶುರಾಮ್ (PSI Parashuram) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಯಾದಗಿರಿ ಶಾಸಕ ಚೆನ್ನಾರೆಡ್ಡಿ (Channa Reddy Patel) ಹಾಗೂ ಪುತ್ರ ಪಂಪನಗೌಡ (ಸನ್ನಿ ಗೌಡ) ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೃತ ಪಿಎಸ್‌ಐ ಪತ್ನಿ ಶ್ವೇತಾ ಅವರು ಕುಟುಂಬಸ್ಥರ ಜೊತೆ ಯಾದಗಿರಿ ಟೌನ್ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ಈಗ ಭಾರತಿಯ ನ್ಯಾಯ ಸಂಹಿತೆ 108(3,5), ಸೆಕ್ಷನ್ 352 ಅಡಿಯಲ್ಲಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯಾದಗಿರಿ ಶಾಸಕರಿಂದ ಪೋಸ್ಟಿಂಗ್‌ಗೆ 30 ಲಕ್ಷ ರೂ ಬೇಡಿಕೆ? – ಪಿಎಸ್‌ಐ ಸಾವಿನ ಸುತ್ತ ಅನುಮಾನದ ಹುತ್ತ
Advertisement
Advertisement
ಶಾಸಕರು ಹಣ ನೀಡುವಂತೆ ನಿರಂತರ ಒತ್ತಡ ಹೇರುತ್ತಿದ್ದರು ಎಂದು ಶ್ವೇತಾ ದೂರಿನಲ್ಲಿ ಆರೋಪಿಸಿದ್ದಾರೆ. ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮೊದಲು ಶಾಸಕರ ಪುತ್ರನ ಬಂಧನವಾಗುವ ಸಾಧ್ಯತೆಯಿದೆ. ನಂತರ ಶಾಸಕ ಚೆನ್ನಾರೆಡ್ಡಿ ಬಂಧನವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದ ಪಿಎಸ್‌ಐ ಸಾವು: ಇದು ಲೂಟಿ ಸರ್ಕಾರ ಎಂದ ಅಶೋಕ್
Advertisement
ಶಾಸಕ ಚೆನ್ನಾರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಸದಸ್ಯರು ಭಾರೀ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಮಣಿದಿ ಪೊಲೀಸರು ಮೃತಪಟ್ಟು ಹಲವು ಗಂಟೆ ಕಳೆದ ಬಳಿಕ ಶಾಸಕ, ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Advertisement