ಬೆಂಗಳೂರು: ಮಂಗಳವಾರ ಪಿಎಸ್ಐ ಮರು ಪರೀಕ್ಷೆ (PSI Re Exam) ನಡೆಯಲಿದ್ದು, ಈ ಹಿನ್ನೆಲೆಯಲ್ಲಿ 117 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ.
ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನೇಮಿಸಲಾಗಿದೆ.
Advertisement
Advertisement
ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಬೇರಾವ ಭಾಗದಲ್ಲೂ ಪರೀಕ್ಷಾ ಕೇಂದ್ರ ಇಲ್ಲ. ಪೊಲೀಸರು ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪದವಾಗಿ ಓಡಾಡುವವರು, ಗಾಳಿಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ.
Advertisement
ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಲಿದ್ದಾರೆ. ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನಾಗಲಿ, ಮೊಬೈಲ್ ಇಟ್ಟುಕೊಂಡು ಬರುವುದನ್ನಾಗಲಿ ನಿಷೇಧಿಸಲಾಗಿದೆ.