ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಟಾಪರ್ ಆಗಿದ್ದ ಅಭ್ಯರ್ಥಿ ರಚನಾ ಹನುಮಂತ ಸೇರಿದಂತೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಫ್‌ಐಆರ್‌ನಲ್ಲಿ ಎ 17ನೇ ಆರೋಪಿಯಾಗಿರುವ ರಚನಾ, ಮಹಿಳೆ ಎಸ್‌ಐ ಮೆರಿಟ್ ಪಟ್ಟಿಯಲ್ಲಿ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ
Advertisement
Advertisement
ಸಿಐಡಿ ಡಿವೈಎಸ್‌ಪಿ ನರಸಿಂಹಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಈವರೆಗೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಒಟ್ಟು 172 ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆಗೆ ಕರೆಯಲಾಗಿತ್ತು. 4 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲರೂ ವಿಚಾರಣೆಗೆ ಹಾಜರಾಗಿದ್ದರು.
Advertisement
ಅಭ್ಯರ್ಥಿಗಳ ನಕಲಿ ಓಎಂಆರ್ ಶೀಟ್‌ಗಳನ್ನು ಪಂಚನಾಮೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆ ಬಳಿಕ ವೈಜ್ಞಾನಿಕವಾಗಿ ಪರಿಶೀಲಿಸಲು ಅಸಲು ಮತ್ತು ನಕಲಿ ಓಎಂಆರ್ ಪ್ರತಿಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿತ್ತು. ಏಪ್ರಿಲ್ 28 ರಂದು ಎಫ್‌ಎಸ್‌ಎಲ್‌ನಿಂದ ವರದಿ ಬಂದಿದ್ದು, 22 ಅಭ್ಯರ್ಥಿಗಳ ಓಎಂಆರ್ ಶೀಟ್‌ನಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದೆ. ಅಕ್ರಮವೆಸಗಿರೊ 22 ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. 22 ಅಭ್ಯರ್ಥಿಗಳು ಇತರ ವ್ಯಕ್ತಿಗಳೊಂದಿಗೆ ಸೇರಿ ಸಂಚು ರೂಪಿಸಿ ಅಕ್ರಮ ಎಸಗಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 13 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?
Advertisement
ಪ್ರಕರಣದ ಆರೋಪಿಯಾಗಿರುವ ರಚನಾ, ಆರಂಭದಲ್ಲಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಾಮಾಣಿಕರ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾಧ್ಯಮಗಳ ಮುಂದೆ ಮಾತನಾಡುವಾಗ, ಇಡೀ ರಾಜ್ಯಕ್ಕೆ ಮಹಿಳಾ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಬಂದು, ತುಂಬಾ ಖುಷಿ ಪಟ್ಟಿದ್ದೆ. ಆದರೆ ಈಗ ಮರು ಪರೀಕ್ಷೆಗೆ ಸರ್ಕಾರ ಆದೇಶ ಮಾಡಿದೆ. ಇದನ್ನು ಕೇಳಿ ತುಂಬಾ ಬೇಸರವಾಗಿದೆ. ಕಡು ಬಡತನದಿಂದ ಬಂದು ನಾನು ಓದಿದ್ದೇನೆ. ನಾನು ನಮ್ಮ ತಾಯಿ ಇಬ್ಬರೇ ಇದ್ದೇವೆ. ಹೆಣ್ಣು ಮಗು ಆಯ್ತು ಅಂತ ನಮ್ಮನ್ನು ನಮ್ಮ ತಂದೆ ಬಿಟ್ಟು ಹೋಗಿದ್ದರು. ನನಗಾಗಿ ನಮ್ಮ ತಾಯಿ 25 ವರ್ಷದಿಂದ ಕಷ್ಟ ಪಡುತ್ತಿದ್ದಾರೆ ಎಂದು ರಚನಾ ಹೇಳಿಕೊಂಡಿದ್ದರು.
ಪಿಎಸ್ಐ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮೂಲದವರು. ರಚನಾ ತನ್ನ ತಾಯಿಯೊಂದಿಗೆ ವಾಸವಾಗಿದ್ದಾರೆ. ಬಾಗೇವಾಡಿಯ ಮಾವ, ಅಜ್ಜಿಯ ಜೊತೆಗಿದ್ದಾರೆ. ರಚನಾ ತಾಯಿ ಸಾವಿತ್ರಿ ಮುತ್ತಲಗೇರಿ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಸಾವಿತ್ರಿ ಅವರು ಈ ಹಿಂದೆ ಬಸವನ ಬಾಗೇವಾಡಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾದ್ದರು. ಕಳೆದ 5 ವರ್ಷದ ಹಿಂದೆ ಬೀದರ್ ಸೇರಿದ್ದರು. ಇದನ್ನೂ ಓದಿ: ಪಿಎಸ್‍ಐ ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ, ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ: ಬಿಜೆಪಿ