PSI ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

Public TV
1 Min Read
Divya hagaragi (2)

ಬೆಳಗಾವಿ/ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

Karnataka PSI exam scam divya hagaragi

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಇಂದು ಸಿಐಡಿ ಎಸ್‌ಪಿ. ರಾಘವೇಂದ್ರ ಹೆಗಡೆ, ಡಿವೈಎಸ್‍ಪಿ, ಪ್ರಕಾಶ್ ರಾಠೋಡ್, ಡಿವೈಎಸ್‍ಪಿ ಶಂಕರಗೌಡ ನೇತೃತ್ವದ ತಂಡದಿಂದ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ. ಇದೇ ವೇಳೆ ಮತ್ತೋರ್ವ ಆರೋಪಿಯಾಗಿದ್ದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿ ಹಾಗೂ ಶಿಕ್ಷಕಿ ಅರ್ಚನಾರನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪುಣೆಯ ಹೋಟೆಲ್‍ವೊಂದರಲ್ಲಿ ತಂಗಿದ್ದರು. ಸದ್ಯ ಅಧಿಕಾರಿಗಳು ದಿವ್ಯಾ ಹಾಗರಗಿಯನ್ನು ಪುಣೆಯಿಂದ ಕಲಬುರಗಿಗೆ ಕರೆತರುತ್ತಿದ್ದಾರೆ.  ಇದನ್ನೂ ಓದಿ:  ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ – ಸ್ಫೋಟಕ ಆಡಿಯೋ ಔಟ್

Divya Hagaragi

ಪ್ರಕರಣಕ್ಕೆ ಸಂಬಂಧಿಸಿದ ಇನ್ನೂ ಐವರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರನ್ನು ವಿಚಾರಣೆ ನಡೆಸಿ ಅಕ್ರಮದಲ್ಲಿ ಭಾಗಿಯಾಗಿದ್ದರೆ, ಅರೆಸ್ಟ್‌ ಮಾಡಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್‍ಐ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ನಡೆದಿತ್ತು. ಇತ್ತೀಚೆಗಷ್ಟೇ ಈ ಪ್ರಕರಣದ ಪ್ರಮುಖ ಆರೋಪಿಯಾದ ಅಫಜಲಪುರ ಬ್ಲಾಕ್‍ನ ಕಾಂಗ್ರೆಸ್ ಅಧ್ಯಕ್ಷನ ಸಹೋದರನಾಗಿರುವ ಕಿಂಗ್ ಪಿನ್ ಆರ್.ಡಿ.ಪಾಟೀಲ್‍ನನ್ನು ಪೊಲೀಸರು ಬಂಧಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *