ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಪಿಎಸ್‍ಐ ಹಗರಣದಲ್ಲಿ (PSI Recruitment Scam) ತಮ್ಮ ಹೆಸರು ಕೇಳಿಬರುತ್ತಿರುವ ಹಿನ್ನೆಲೆ ಶಾಸಕ ಬಸವರಾಜ ದಡೇಸೂಗೂರು (Basavaraj Dadesugur) ಸ್ಪಷ್ಟೀಕರಣ ನೀಡಿದ್ದಾರೆ.
Advertisement
ವಿಧಾನಭೆಯಲ್ಲಿ ಮಳೆಗಾಲದ ಅಧಿವೇಶನ ಹಿನ್ನೆಲೆ ವಿಧಾನಸೌಧದ (Vidhana Soudha) ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ. ಮಾಧ್ಯಮದಲ್ಲಿ ಬಂದಿರುವ ಆಡಿಯೋ 2020ರದ್ದು, ಈಗಿನದ್ದಲ್ಲ. ಪಿಎಸ್ಐ ಹಗರಣಕ್ಕೂ ಅದಕ್ಕೂ ಸಂಬಂಧ ಇಲ್ಲ. ನಮ್ಮ ಕ್ಷೇತ್ರದ ಮಾಜಿ ಶಾಸಕರು ನಾನು ಯಾವಾಗ್ಯಾವಗಲೋ ಮಾತಾಡಿರೋದನ್ನು ಕಟ್ ಮಾಡಿ ವೀಡಿಯೋ ಮಾಡಿದ್ದಾರೆ. ಎಡಿಟ್ ಮಾಡಿರುವ ಆಡಿಯೋ ಅದು. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಿಧು ಹತ್ಯಾ ಪ್ರಕರಣ – ಉತ್ತರ ಭಾರತದಾದ್ಯಂತ 50 ಕಡೆಗಳಲ್ಲಿ ಎನ್‌ಐಎ ದಾಳಿ
Advertisement
Advertisement
ನಾನು ತಪ್ಪು ಮಾಡಿಲ್ಲ. ಆಡಿಯೋಗಳನ್ನು ಎಡಿಟ್ ಮಾಡಿ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯವಾಗಿ ದ್ವೇಷ ಸಾಧಿಸುತ್ತಿದ್ದಾರೆ. ಪಿಎಸ್‍ಐ ಕುರಿತಾಗಿ ಅಲ್ಲ. ನಾನು ಈ ಹಿಂದೆ ರಾಜಿ ಪಂಚಾಯಿತಿ ಸಂಬಂಧ ಮಾತನಾಡಿದ್ದೆ, ಅದು ಹಳೆಯ ಆಡಿಯೋ ಅದನ್ನು ಎಡಿಟ್ ಮಾಡಿ ಇದೀಗ ಹರಿಬಿಡಲಾಗಿದೆ. ನನ್ನ ಬಳಿ ಎಲ್ಲಾ ದಾಖಲೆಗಳಿವೆ. ನಿವೃತ್ತ ಪೊಲೀಸ್ ಕಾನ್ಸ್‌ಟೇಬಲ್ ಪರಸಪ್ಪನ ಮಗ ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿಲ್ಲ ಮತ್ತೆ ಹೇಗೆ ಪರೀಕ್ಷೆ ಬರೆಯಲು ಸಾಧ್ಯ? ನಾನು ದಾಖಲೆ ಸಮೇತ ಸದನಕ್ಕೆ ಬಂದಿದ್ದೇನೆ. ಸಿಡಿ ಕೂಡ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗುಂಡಿ ಮುಚ್ಚಲು ಕಟ್ಟಡ ತ್ಯಾಜ್ಯ ಬಳಸಿದ ಪಾಲಿಕೆ – BBMP ಕಳಪೆ ಕಾಮಗಾರಿಗೆ ಜನರ ಛೀಮಾರಿ
Advertisement
ಪಿಎಸ್‍ಐ ಪ್ರಕರಣ ಸಂಬಂಧ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರು ಅವರ ಆಡಿಯೋ ಈ ಹಿಂದೆ ವೈರಲ್ ಆಗಿತ್ತು. ಪಿಎಸ್‍ಐ ಮಾಡಿಸ್ತೀನಿ ಎಂದು 15 ಲಕ್ಷ ರೂಪಾಯಿ ಲಂಚ ಪಡೆದಿರುವ ಆರೋಪವನ್ನು ದಡೇಸೂಗೂರು ಎದುರಿಸುತ್ತಿದರು. ಪರಸಪ್ಪ ಎಂಬುವವರ ಮಗನ ನೇಮಕಾತಿಗೆ ಹಣ ಪಡೆದಿದ್ದನ್ನು, ಸರ್ಕಾರಕ್ಕೆ ಆ ಹಣ ತಲುಪಿಸಿದ್ದೇನೆ ಎಂಬುದನ್ನು ಶಾಸಕರು ಫೋನ್ ಸಂಭಾಷಣೆಯಲ್ಲಿ ಒಪ್ಪಿಕೊಂಡಿದ್ದ ಆಡಿಯೋ ವೈರಲ್ ಆಗಿತ್ತು.