ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ (PSI Recruitment Scam) ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court) ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಪಿಎಸ್‌ಐ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.
ಅಕ್ರಮದ ಕಾರಣಕ್ಕೆ ಪರೀಕ್ಷೆ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ನ್ಯಾ. ದಿನೇಶ್ ಕುಮಾರ್, ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ
Advertisement
Advertisement
ಅಕ್ರಮದಲ್ಲಿ ಭಾಗಿಯಾಗದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಕ್ಕೆ ಅರ್ಜಿದಾರರು ಮನವಿ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ಹೊರಡಿಸಿತು. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದೆ. ಕೋರ್ಟ್ ತೀರ್ಪಿನಿಂದ ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ.
Advertisement
ಪ್ರಕರಣ ಏನು?
ಕಳೆದ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಬಳಿಕ ತನಿಖೆಯ ವೇಳೆ ಪರೀಕ್ಷಾ ಕೇಂದ್ರಗಳನ್ನು ಬುಕ್ ಮಾಡಿಕೊಂಡು ಅಕ್ರಮ ಎಸಗಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಆಡಿಯೋ ಸಹ ವೈರಲ್ ಆಗಿತ್ತು. ಇದಾದ ಬಳಿಕ ಈ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಇದನ್ನೂ ಓದಿ: ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ
Advertisement
ಭಾರೀ ಸಂಖ್ಯೆಯಲ್ಲಿ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಸರ್ಕಾರ ಪಿಎಸ್‌ಐ ಲಿಖಿತ ಪರೀಕ್ಷೆಯನ್ನೇ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಅದೇಶ ಪ್ರಕಟಿಸಿತ್ತು. ಸರ್ಕಾರ ಹೊಸದಾಗಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು.