ಬೆಂಗಳೂರು: ಪಿಎಸ್‍ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ 2ನೇ ಬಾರಿಗೆ ನೋಟಿಸ್ ನೀಡಿದ್ದು, ಈ ಬಾರಿಯಾದರೂ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹಾಜರಾಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಪ್ರಿಯಾಂಕ್ ಖರ್ಗೆ ಅವರು ಸುದ್ದಿಗೋಷ್ಠಿ ನಡೆಸಿ, ಆಡಿಯೋ ಕ್ಲಿಪ್‍ವೊಂದನ್ನು ಬಿಡುಗಡೆ ಮಾಡಿದ್ದರು. ಅಲ್ಲದೇ ಈ ಬಗ್ಗೆ ತಮ್ಮ ಬಳಿ ಕೆಲವು ಸಾಕ್ಷ್ಯಗಳು ಇರುವ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿನ್ನಲೆ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸಾಕ್ಷ್ಯ, ದಾಖಲೆಗಳನ್ನು ಒದಗಿಸುವಂತೆ ಸಿಐಡಿ ಅಧಿಕಾರಿಗಳು ಪ್ರಿಯಾಂಕ್ ಖರ್ಗೆ ಅವರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಇಲ್ಲಿ 1 ಮಾವಿನ ಹಣ್ಣಿಗೆ 2 ಸಾವಿರ – ತಿಂಗಳಿಗೆ ಮುಂಚೆಯೇ ಶುರುವಾಗಿದೆ ಬುಕ್ಕಿಂಗ್
ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಎರಡು ದಿನಗಳ ಒಳಗೆ ಸಿಐಡಿ ಡಿವೈಎಸ್ ಪಿ ನರಸಿಂಹಮೂರ್ತಿ ಅವರ ಮುಂದೆ ಬೆಂಗಳೂರಿನ ಕಾರ್ಲಟನ್ ಭವನದ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: PSI ದೈಹಿಕ ಪರೀಕ್ಷೆಯಲ್ಲೂ ಅಕ್ರಮ, ಥರ್ಮಾಕೋಲ್, ವಿಗ್ ಧರಿಸಿ ನೇಮಕ- ಪ್ರಿಯಾಂಕ್ ಖರ್ಗೆ ಆರೋಪ