ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅರ್ಹತಾ ಪರೀಕ್ಷೆಯ ಮೂಲಕ ಸರ್ಕಾರಿ ಉದ್ಯೋಗ ಭರ್ತಿ ಮಾಡುವುದೇಕೆ? ಈ ಸರ್ಕಾರದಲ್ಲಿ ದುಡ್ಡಿದ್ದವನಿಗೆ ಉದ್ಯೋಗ ಎಂದ ಮೇಲೆ ಬಡವರು ಯಾಕೆ ಪರೀಕ್ಷೆ ಬರೆಯಬೇಕು ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಪ್ರಶ್ನೆ ಮಾಡಿದೆ.
Advertisement
ಟ್ವೀಟ್‍ನಲ್ಲಿ ಏನಿದೆ?
ರಾಜ್ಯದ ಬೊಮ್ಮಾಯಿ ನೇತೃತ್ವದ ಸರ್ಕಾರ ಡಬಲ್ ಇಂಜೀನ್ ಸರ್ಕಾರವಲ್ಲ. ಇದು ಡೀಲಿಂಗ್ ಸರ್ಕಾರ. ಈ ಸರ್ಕಾರದಲ್ಲಿ ಪ್ರತಿ ಸರ್ಕಾರಿ ಉದ್ಯೋಗಕ್ಕೂ ಇಂತಿಷ್ಟು ರೇಟ್ ಎಂದು ಫಿಕ್ಸ್ ಆಗಿದೆ. PSI ನೇಮಕಾತಿಯಲ್ಲಿ ಡೀಲಿಂಗ್, ಪ್ರಾಧ್ಯಾಪಕರ ನೇಮಕಾತಿಯಲ್ಲಿ ಡೀಲಿಂಗ್, ಎಂಜಿನಿಯರ್‌ಗಳ ನೇಮಕಾತಿಯಲ್ಲೂ ಡೀಲಿಂಗ್. ಇದು ಡೀಲಿಂಗ್ ಸರ್ಕಾರವಲ್ಲದೆ ಮತ್ತೇನು?. ವಿಧಾನಸೌಧವನ್ನೇ ಡೀಲಿಂಗ್ ಸೆಂಟರ್ ಮಾಡಿಕೊಂಡಿರುವಾಗ ಎಲ್ಲಾ ನೇಮಕಾತಿಯನ್ನು ಹರಾಜು ಪ್ರಕ್ರಿಯೆಯ ಮೂಲಕವೇ ನಡೆಸಲಿ. ಬಡವರು ಪರೀಕ್ಷೆ ಬರೆದು ಸಮಯ-ಹಣ ಯಾಕೆ ವ್ಯರ್ಥ ಮಾಡಬೇಕು?. ಇದನ್ನೂ ಓದಿ: ಚಿತ್ರನಟರ ಮಾತಿಗೆ ನಾವು ಚರ್ಚೆ ಮಾಡುವ ಅಗತ್ಯವಿಲ್ಲ: ಡಿಕೆಶಿ
Advertisement
Advertisement
ಡೀಲಿಂಗ್ ದಂಧೆಯಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರ ಇತಿಹಾಸ ಕಂಡ ಅತ್ಯಂತ ಕಡುಭ್ರಷ್ಟ ಸರ್ಕಾರ. ಸರ್ಕಾರಿ ಉದ್ಯೋಗಕ್ಕೆ ರೇಟ್ ಫಿಕ್ಸ್ ಮಾಡಿ ದಂಧೆ ನಡೆಸುವ ಈ ಸರ್ಕಾರಕ್ಕೆ ಮಾನ ಮಾರ್ಯಾದೆಯೇನಾದರೂ ಇದೆಯೇ? ಭ್ರಷ್ಟಾಚಾರವನ್ನು ಹಾಸು ಹೊದ್ದು ಮಲಗಿರುವ ಈ ಸರ್ಕಾರಕ್ಕೆ ಜನರ ಎದುರು ಮುಖ ತೋರಿಸಲು ನಾಚಿಕೆಯಾಗುವುದಿಲ್ಲವೆ?. ಇದನ್ನೂ ಓದಿ: ಕೊರೊನಾ 4ನೇ ಅಲೆ ಕಂಟ್ರೋಲ್‌ಗೆ ತಜ್ಞರ ವರದಿ ಕೇಳಿದ ಸರ್ಕಾರ
Advertisement
ಇಂಧನ ಬೆಲೆ ಹೆಚ್ಚಳಕ್ಕೆ – ರಾಜ್ಯಗಳನ್ನ ದೂರುವುದು
ಕಲ್ಲಿದ್ದಲು ಕೊರತೆಗೆ – ರಾಜ್ಯಗಳನ್ನ ದೂರುವುದು
ಆಮ್ಲಜನಕದ ಕೊರತೆಗೆ – ರಾಜ್ಯಗಳನ್ನ ದೂರುವುದು
ಇಂಧನ ತೆರಿಗೆಗಳಲ್ಲಿ 68% ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತದೆ, ಆದರೂ ಪ್ರಧಾನಿ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಾರೆ.
ಮೋದಿಯವರ ಸಂಯುಕ್ತ ನೀತಿಯಲ್ಲಿ ಸಹಕಾರಿ ತತ್ವವಿಲ್ಲ, ಬಲವಂತವಿದೆ. https://t.co/aB6kbfIwx4
— Karnataka Congress (@INCKarnataka) April 28, 2022
ಸಂತೋಷ್ ಪಾಟೀಲ್ ನಂತರ ಮತ್ತೊಬ್ಬ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಜ್ಜೆಗೆಟ್ಟ ಬಿಜೆಪಿ ಸರ್ಕಾರದ 40% ಕಮಿಷನ್ ಕಾಟಕ್ಕೆ ಗುತ್ತಿಗೆದಾರರೆಲ್ಲರೂ ಬೇಸತ್ತಿರುವುದು, ಸಂಕಷ್ಟಕ್ಕೆ ಈಡಾಗಿರುವುದು ಲೋಕಸತ್ಯ. ಈ ಆತ್ಮಹತ್ಯೆಗೂ 40% ಕಮಿಷನ್ ಕಾರಣವಿರುವ ಸಾಧ್ಯತೆ ದಟ್ಟವಾಗಿದೆ, ಈ ಸಾವನ್ನೂ ಸಹ ಗಂಭೀರ ತನಿಖೆಗೆ ಒಳಪಡಿಸಬೇಕು.