DistrictsKalaburagiKarnatakaLatestLeading NewsMain Post

ಪಿಎಸ್‍ಐ ಅಕ್ರಮ: ಸಿಐಡಿಗೆ ಶರಣಾದ ಆರೋಪಿ ಮಂಜುನಾಥ್

ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಮಂಜುನಾಥ್ ಮೇಳಕುಂದಿ ಭಾನುವಾರ ತಾನೇ ಸಿಐಡಿ ಕಚೇರಿಗೆ ಬಂದು ಶರಣಾಗಿದ್ದಾನೆ.

ಕಲಬುರಗಿಯಲ್ಲಿ ಪರೀಕ್ಷೆಯ ಅಕ್ರಮ ಬಯಲಾಗಿತ್ತು. ಈ ಪ್ರಕರಣದ ಆರೋಪಿ ಆಗಿದ್ದ ಮಂಜುನಾಥ್ ಮೇಳಕುಂದಿ ಅವರು ನೀರಾವರಿ ಇಲಾಖೆ ಇಂಜನೀಯರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಎಫ್‍ಐಆರ್ ದಾಖಲಾದ ಬಳಿಕ ನಾಪತ್ತೆ ಆಗಿದ್ದರು. ಈ ಹಿನ್ನೆಲೆಯಲ್ಲಿ 6 ದಿನಗೊಳಗೆ ಶರಣಾಗಬೇಕು, ಇಲ್ಲದಿದ್ದರೇ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕೋಟ್ ಎಚ್ಚರಿಕೆ ನೀಡಿತ್ತು. ಇದೀಗ ಆಟೋದಲ್ಲಿ ಒಬ್ಬನೇ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಆರೋಗ್ಯ ಸರಿಯಿರಲಿಲ್ಲ. ಹೀಗಾಗಿ ಮಂಗಳೂರಿಗೆ ಹೋಗಿದ್ದೆ. ಇಂದು ಮುಂಜಾನೆ ಕಲಬುರಗಿಗೆ ಬಂದಿದ್ದೇನೆ. ನಂತರ ನಾನೇ ಸಿಐಡಿ ಮಂದೆ ಶರಣಾಗಲು ಬಂದಿದ್ದೇನೆ ಎಂದು ತಿಳಿಸಿದರು.ಇದನ್ನೂ ಓದಿ: ದುರ್ಬಲ ಇರೋ ಕಡೆ ಬದಲಾವಣೆ ಮಾಡಲಾಗುತ್ತೆ: ಸಿ.ಟಿ.ರವಿ

ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲೂ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳು ಅರೆಸ್ಟ್

Leave a Reply

Your email address will not be published.

Back to top button