ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಎಡಿಜಿಪಿ ಹುದ್ದೆಯಲ್ಲಿರುವ ಅಧಿಕಾರಿಯ ಬಂಧನವಾಗಿದೆ. ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿದೆ.
25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂ. ಡೀಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಈಗ ಮತ್ತಷ್ಟು ವಿಚಾರಣೆ ನಡೆಸಲು ಬಂಧಿಸಿದೆ. ಇದನ್ನೂ ಓದಿ: ಶಾಲೆಯಲ್ಲಿ ಕಂಪ್ಯೂಟರ್ ಕಳವು- ತಾಕತ್ತಿದ್ರೆ ನಮ್ಮನ್ನ ಹಿಡೀರಿ ಎಂದು ನಂಬರ್ ಬರೆದಿಟ್ಟ ಕಳ್ಳರು
Advertisement
Advertisement
545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಅವರಿಗೆ ದೂರುಗಳು ಬಂದಿದ್ದವು. ಆದರೆ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿತ್ತು. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾಯಿಸಲಾಗಿತ್ತು.
Advertisement
ಆರೋಪ ಏನು?
545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್ ಪೌಲ್ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಇಂದು ಮತ್ತೆ ವಿಚಾರಣೆಗೆ ಕರೆದಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್ ಪೌಲ್ ಅವರನ್ನು ಬಂಧಿಸಿದೆ.