ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣ (PSI Scam) ಸಂಬಂಧ ಎಡಿಜಿಪಿ ಅಮೃತ್ ಪೌಲ್ (Amrit Paul) ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಸಿಕ್ಕಿದೆ.
ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ಮಾಡಲು ಅವಕಾಶ ಇದೆ. ಆರೋಪಿ ವಿರುದ್ಧ ಚಾರ್ಜ್ ಫ್ರೇಮ್ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ ಅಮೃತ್ ಪೌಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ಇದನ್ನೂ ಓದಿ: ಮುರುಘಾ ಮಠಕ್ಕೆ ಜಿಲ್ಲಾ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯಾಗಿ ನೇಮಿಸಿದ ಹೈಕೋರ್ಟ್
Advertisement
Advertisement
Advertisement
ಅಮೃತ್ ಪೌಲ್ ಐಪಿಎಸ್ ಅಧಿಕಾರಿ ಆಗಿದ್ದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕಡ್ಡಾಯವಾಗಿತ್ತು. ಈಗ ಅನುಮತಿ ದೊರೆತಿದ್ದು, ಪಿಎಸ್‍ಐ ಹಗರಣದ ತನಿಖೆಯಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಂತಾಗಿದೆ. ಈ ಮೂಲಕ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಿಟ್‍ಕಾಯಿನ್ ಹಾಗೂ ಪಿಎಸ್‍ಐ ಹಗರಣಕ್ಕೆ ಒಂದೇ ದಿನ ಮರು ಜೀವ ಬಂದಂತಾಗಿದೆ.
Advertisement
ಏನಿದು ಪ್ರಕರಣ?
ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಬಳಿಕ ತನಿಖೆಯ ವೇಳೆ ಪರೀಕ್ಷಾ ಕೇಂದ್ರಗಳನ್ನು ಬುಕ್ ಮಾಡಿಕೊಂಡು ಅಕ್ರಮ ಎಸಗಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಆಡಿಯೋ ಸಹ ವೈರಲ್ ಆಗಿತ್ತು. ಇದಾದ ಬಳಿಕ ಈ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈಗಲೂ ಪ್ರಕರಣ ವಿಚಾರಣೆ ಹಂತದಲ್ಲಿದೆ. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಸಚಿವರು ಹಾಗೂ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಅಲ್ಲದೇ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಎಸಗಿರುವ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಇತ್ತೀಚೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ
Web Stories