ಬೆಂಗಳೂರು: ಸಬ್ ಇನ್ಸ್‌ಪೆಕ್ಟರ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್‌ಬಿಆರ್ ಬಡಾವಣೆಯಲ್ಲಿ (HBR Layout) ನಡೆದಿದೆ.
ಶಾಲಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸೋಮವಾರ ರಾತ್ರಿ ಹೆಚ್‌ಬಿಆರ್ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಿವಿಲ್ ನ್ಯಾಯಾಧೀಶ ಸ್ಥಾನಕ್ಕೆ ನೇಮಕಾತಿಯಾಗಲು ಕನಿಷ್ಠ ಮೂರು ವರ್ಷಗಳ ವಕೀಲಿಕಿ ಅನುಭವ ಕಡ್ಡಾಯ: ಸುಪ್ರೀಂ
ಪತಿ ನಾಗರಾಜ್ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೃತ ಶಾಲಿನಿ ಮೊದಲ ಪತಿಗೆ ವಿಚ್ಛೇದನ ನೀಡಿದ ಬಳಿಕ ನಾಗರಾಜ್ ಅವರನ್ನ 2ನೇ ಮದುವೆಯಾಗಿದ್ದರು. ಘಟನೆ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 7 ತಿಂಗಳಲ್ಲಿ 25 ಮದುವೆ; ಅಮಾಯಕರಿಗೆ ಲಕ್ಷಾಂತರ ಹಣ ವಂಚಿಸಿದ್ದ ಖತರ್ನಾಕ್ ಲೇಡಿ ಅರೆಸ್ಟ್
ಮೃತ ಶಾಲಿನಿ ಮತ್ತು ಪಿಎಸ್ಐ ನಾಗರಾಜ್ ಇಬ್ಬರೂ ಇಳಕಲ್ ಮೂಲದವರು. ಹೈಸ್ಕೂಲ್‌ನಲ್ಲಿ ಟ್ಯೂಷನ್‌ಮೆಟ್ಸ್ ಆಗಿದ್ದರು. ನಂತರ ಶಾಲಿನಿ MSc ಹಾಗೂ ನಾಗರಾಜ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. ಇದಾದ ಬಳಿಕ ನಾಗರಾಜ್ ಬೆಂಗಳೂರಿನಲ್ಲಿ ಪಿಎಸ್‌ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅದೇ ವೇಳೆ ಶಾಲಿನಿ ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್‌ಗೆ ಪಿಎಸ್‌ಐ ಪರೀಕ್ಷೆ ತಯಾರಿಗೆ ಆರ್ಥಿಕ ಸಹಾಯ ಕೂಡ ಮಾಡುತ್ತಿದ್ದರು. ಹೀಗೆ ಮುಂದುವರಿಯುತ್ತಾ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ನಾಗರಾಜ್ ಪರಿಚಯ ಆದಮೇಲೆ ಮೊದಲ ಪತಿಗೆ ಶಾಲಿನಿ ಡಿವೋರ್ಸ್ ನೀಡಿದ್ದರು. ಸದ್ಯ ಮೃತ ಶಾಲಿನಿಗೆ 7 ವರ್ಷದ ಮಗು ಇದೆ. ಇದನ್ನೂ ಓದಿ: ಬೆಂಗ್ಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ
2020ರಲ್ಲಿ ಪಿಎಸ್‌ಐ ಎಕ್ಸಾಂ ಪಾಸ್ ಮಾಡಿದ್ದ ನಾಗರಾಜ್, ಶಾಲಿನಿಯನ್ನ ಅವಾಯ್ಡ್ ಮಾಡಲು ಶುರು ಮಾಡಿದ್ದನಂತೆ. ಮದುವೆ ಆಗದೆ ಮೋಸ ಮಾಡ್ತಿದ್ದಾನೆ ಅಂತ ಕೋಣನಕುಂಟೆ ಠಾಣೆಯಲ್ಲಿ ನಾಗರಾಜ್ ಮೇಲೆ ಶಾಲಿನಿ ದೂರು ನೀಡಿದ್ಲು. ಆಗ ಹಿರಿಯ ಅಧಿಕಾರಿಗಳು ಇಲಾಖಾ ತನಿಖೆಯನ್ನು ನಡೆಸಿದ್ರಂತೆ. ಬಳಿಕ ಶಾಲಿನಿ ಕುಟುಂಬಸ್ಥರ ವಿರೋಧದ ನಡುವೆ 2024ರ ಆಗಸ್ಟ್ ನಲ್ಲಿ ಶಾಲಿನಿ ನಾಗರಾಜ್ ಮದುವೆ ನಡೆದಿತ್ತು. ಗಂಡ-ಹೆಂಡತಿ HBR ಲೇಔಟ್ ನಲ್ಲಿ ವಾಸವಾಗಿ ಚೆನ್ನಾಗಿ ಸಂಸಾರ ನಡೆಸ್ತಾ ಇದ್ರು. ಆದರೆ ಕಳೆದೆರಡು ತಿಂಗಳಿನಿಂದ ಶಾಲಿನಿ ನಾಗರಾಜ್ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು. ಬೇಸತ್ತು ನಾಗರಾಜ್ ಬೇರೆಡೆ ವಾಸವಿದ್ದ. ಪತಿ ಮನೆಗೆ ಬರುತ್ತಿಲ್ಲವೆಂದು ಕೋಪಗೊಂಡ ಶಾಲಿನಿ ನಿನ್ನೆ ರಾತ್ರಿ ಕರೆ ಮಾಡಿ ರೈಲಿಗೆ ಸಿಕ್ಕಿ ಸಾಯುತ್ತೇನೆಂದು ಹೇಳಿ ಮನೆಯಿಂದ ಹೊರಟ್ಟಿದ್ದರು. ಈ ವೇಳೆ ಹೊಯ್ಸಳ ಸಿಬ್ಬಂದಿ ರಕ್ಷಿಸಿ ಮನೆಗೆ ಬಿಟ್ಟು ತೆರಳಿದ್ರು. ಹೊಯ್ಸಳ ಸಿಬ್ಬಂದಿ ಮನೆಗೆ ಬಿಟ್ಟು ತೆರಳುತ್ತಿದ್ದಂತೆ ಶಾಲಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಪಿ.ಎಸ್.ಐ ನಾಗರಾಜ್ ನನ್ನು ಹಿರಿಯ ಅಧಿಕಾರಿಗಳು ವಿಚಾರಣೆ ನಡೆಸ್ತಿದ್ದಾರೆ. ಶಾಲಿನಿ ಕುಟುಂಬಸ್ಥರು ದೂರು ಕೊಟ್ಟ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ.