ಬೆಂಗಳೂರು: ದಲಿತರ ಜಮೀನು ಹಕ್ಕು (Land Rights of Dalits) ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜೊತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಖಡಕ್ಕಾಗಿ ನುಡಿದರು.
ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿ.ಟಿ.ಸಿ.ಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ.
ನಾವು ಮೊದಲೇ ಕೊಟ್ಟಿದ್ದ…
— CM of Karnataka (@CMofKarnataka) July 17, 2023
Advertisement
ಸಿಎಂ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ (PTCL Act) ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
Advertisement
ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸುದೀಪ್ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ, ನ್ಯಾಯ ಸಿಗುವ ತನಕ ಪ್ರತಿಭಟನೆ- ಎನ್.ಕುಮಾರ್
Advertisement
Advertisement
ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಅನ್ನೋ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ. ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಹೆಚ್.ಸಿ ಮಹದೇವಪ್ಪ, ಹೆಚ್.ಕೆ ಪಾಟೀಲ್, ಡಾ.ಜಿ ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್ ರಾಜಣ್ಣ, ಆರ್.ಬಿ ತಿಮ್ಮಾಪುರ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
35 ಮಂದಿ ನಾಯಕರು ಭಾಗಿ:
ಸಭೆಯಲ್ಲಿ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಶ್ರೀಧರ್ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂದರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್. ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ ಸಾಗರ್ ಸೇರಿ 35ಕ್ಕೂ ಅಧಿಕ ಮಂದಿ ದಲಿತ ಮುಖಂಡರು ಮತ್ತು ವಕೀಲರು ಉಪಸ್ಥಿತರಿದ್ದು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನ ವ್ಯಕ್ತಪಡಿಸಿದರು.
Web Stories