ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮತ್ತಷ್ಟು ಹೈಟೆಕ್ ಆಗಿದ್ದು, ಈ ಬಾರಿಯ ಪಿಯು ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಪಡೆಯುವ ಅವಕಾಶ ಕಲ್ಪಿಸಿದೆ.
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ಮೊದಲ ಬಾರಿಗೆ ಡಿಜಿ ಲಾಕರ್ ಮೂಲಕ ಅಂಕಪಟ್ಟಿ ನೀಡುವ ಯೋಜನೆ ರೂಪಿಸಿಕೊಂಡಿದ್ದು, ಮತ್ತಷ್ಟು ಹೈಟೆಕ್ ಸೌಲಭ್ಯವನ್ನು ಜಾರಿಗೊಳಿಸಲು ಸಜ್ಜಾಗಿದೆ.
Advertisement
ಕಳೆದ ಮಾರ್ಚ್ ನಲ್ಲಿ ನಡೆದ ದ್ವೀತಿಯ ಪಿಯುಸಿ ಪರೀಕ್ಷೆಯ ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಅಪ್‍ಲೋಡ್ ಮಾಡಿದೆ. ವಿದ್ಯಾರ್ಥಿಗಳು ತಮ್ಮ ತಮ್ಮ ಅಂಕಪಟ್ಟಿಗಳನ್ನು ಡಿಜಿ ಲಾಕರ್ ವೆಬ್ ಸೈಟ್ ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಪದವಿ ಪೂರ್ವ ಮಂಡಳಿಯ ನಿರ್ದೇಶಕಿ ಶಿಖಾರವರು ತಿಳಿಸಿದ್ದಾರೆ.
Advertisement
Advertisement
ಏನಿದು ಡಿಜಿ ಲಾಕರ್?
ಕೇಂದ್ರ ಸರ್ಕಾರವು ಆನ್‍ಲೈನ್‍ಗಳಲ್ಲಿ ಅಂಕಪಟ್ಟಿ ಶೇಖರಣಾ ಮಾಡಿ ನಮಗೆ ಯಾವಾಗ ಬೇಕಾದರೂ ಪಡೆಯಬಹುದಾದ ನೂತನ ಡಿಜಿ ಲಾಕರ್ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ಈ ಡಿಜಿ ಲಾಕರ್ ವೆಬ್‍ಸೈಟ್‍ನಲ್ಲಿ ಒಟ್ಟು 5 ಜಿಬಿವರೆಗಿನ ದಾಖಲೆಗಳನ್ನು ಶೇಖರಿಸಿಡಬಹುದಾಗಿದೆ. ಅಲ್ಲದೇ ಯಾವುದೇ ದಾಖಲೆಗಳ ಪರಿಶೀಲನೆಗೆ ಈ ಡಿಜಿ ಲಾಕರ್ ವ್ಯವಸ್ಥೆ ಬಲು ಸುಲಭವಾಗಿದೆ. ಇದರಲ್ಲಿ ಶೈಕ್ಷಣಿಕ ಪ್ರಮಾಣ ಪತ್ರ, ಅಂಕಪಟ್ಟಿ, ಗುರುತಿನ ಚೀಟಿ ಮೊದಲಾದ ದಾಖಲೆಗಳನ್ನು ಇಮೇಜ್ ರೂಪದಲ್ಲಿ ಸಂಗ್ರಹಿಸಿಡಬಹುದಾಗಿದೆ.