Wednesday, 23rd October 2019

Recent News

ನೇಣು ಬಿಗಿದುಕೊಂಡು ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರು: ಪಿಯು ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಜಿಲ್ಲೆಯ ಸಿಂಧನೂರಿನ ಶೃತಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಡ್ಯಾಫೊಡಿಲ್ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಶೃತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ವೇಳೆ ಪೋಷಕರು ಸತ್ಸಂಗಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.

ಪ್ರಸ್ತುತ ಯುವತಿಯ ಮೃತದೇಹವನ್ನು ತಾಲೂಕು ಆಸ್ಪತ್ರೆಯಲ್ಲಿ ಇಡಲಾಗಿದ್ದು, ಆಸ್ಪತ್ರೆಯ ಮುಂಭಾಗದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ರಾತ್ರಿ ಅಂತ್ಯ ಸಂಸ್ಕಾರ ನಡೆಯಲಿದೆ.

ಯುವತಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇಮ ವೈಫಲ್ಯ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *