ಪಬ್‍ಜಿ ಆಡಲು ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆ

Public TV
1 Min Read
pubg

ಮುಂಬೈ: ಯುವಕನೊಬ್ಬ ಪಬ್‍ಜಿ ಆಡಲು ಪೋಷಕರು ಹೊಸ ಮೊಬೈಲ್ ಖರೀದಿಸಿಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿರುವ ನೆಹರು ನಗರದಲ್ಲಿ ನಡೆದಿದೆ.

ಯುವಕ ಪಬ್‍ಜಿ ಗೇಮ್ ಆಡಲು 37 ಸಾವಿರ ರೂ. ಮೌಲ್ಯದ ಸ್ಮಾರ್ಟ್ ಫೋನ್ ಕೊಡಿಸಿ ಎಂದು ಪೋಷಕರ ಬಳಿ ಕೇಳಿಕೊಂಡಿದ್ದನು. ಆದರೆ ಪೋಷಕರು ಇದಕ್ಕೆ ನಿರಾಕರಿಸಿ 20,000 ರೂ.ಕ್ಕಿಂತ ಹೆಚ್ಚು ವೆಚ್ಚದ ಮೊಬೈಲ್ ಕೊಡಿಸುವುದಿಲ್ಲ ಎಂದು ಹೇಳಿದ್ದಾರೆ.

pubg 2

ಪೋಷಕರ ಮಾತನ್ನು ಕೇಳದೇ ಯುವಕ ಅವರ ಬಳಿ ವಾದ-ವಿವಾದ ಮಾಡಿದ್ದಾನೆ. ಆದರೆ ಪೋಷಕರು ಒಪ್ಪದೇ ಇರುವ ಕಾರಣ ಯುವಕ ಮನನೊಂದು ಹಗ್ಗ ತೆಗೆದುಕೊಂಡು ಹೋಗಿ ಅಡುಗೆ ಮನೆಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆಯನ್ನು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ವಿಚಾರಣೆ ಕೂಡ ನಡೆಸುತ್ತಿದ್ದಾರೆ.

pubg.2

ಏನಿದು ಪಬ್ ಜಿ?
ಪಬ್ ಜಿ ಎನ್ನುವುದು ಒಂದು ಬ್ಯಾಟಲ್ ಫೀಲ್ಡ್ ಗೇಮ್ (ಯುದ್ಧ ಭೂಮಿ ಆಟ). ಈ ಆಟದ ಸಂಪೂರ್ಣ ಭೂಪಟವನ್ನು ಆಟಗಾರಿಗೆ ಮೊದಲು ತೋರಿಸಲಾಗುತ್ತದೆ. ಬಳಿಕ ಆಟಗಾರರು ತಮಗೆ ಬೇಕಾದ ಪ್ರದೇಶವನ್ನು ಆಯ್ದುಕೊಂದು ಆ ಪ್ರದೇಶಕ್ಕೆ ವಿಮಾನದಿಂದ ಕೆಳಗೆ ಹಾರಿ ಮನೆಗಳತ್ತ ಓಡ್ತಾರೆ. ಆಟಗಾರರಿದ್ದ ಪ್ರದೇಶದಲ್ಲಿ ಸಿಕ್ಕ ಶಸ್ತ್ರಾಸ್ತ್ರಗಳನ್ನು, ಮೆಡಿಕಲ್ ಕಿಟ್‍ಗಳನ್ನು, ಯುದ್ಧಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಆಯ್ದುಕೊಂಡು ಮುಂದೆ ಸಾಗುತ್ತಾರೆ. ಆಟಗಾರರು ಇಳಿದ ಪ್ರದೇಶದ ಸುತ್ತ ವೃತ್ತವೊಂದು ಸಣ್ಣದಾಗುತ್ತೆ. ಆಗ ಅಲ್ಲಿದ್ದ ನೂರಾರು ಜನರ ಜೊತೆ ಹೋರಾಡಿ ಉಳಿದರೇ ಗೆದ್ದಂತೆ, ಮೃತಪಟ್ಟರೆ ಸೋತಂತೆ. ಈ ಆಟದ ವಿಶೇಷ ಏನೆಂದರೆ ಸ್ನೇಹಿತರ ಜೊತೆ ಸೇರಿ ಆಡಬಹುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *