– ಕಲಬುರಗಿಯ ಸಿದ್ಧಾರೂಢ ಇವತ್ತಿನ ಪಬ್ಲಿಕ್ ಹೀರೋ
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮನ್ನಹಳ್ಳಿ ಗ್ರಾಮಪಂಚಾಯ್ತಿ ವಿದ್ಯಾರ್ಥಿನಿಯರಿಗಾಗಿ ಉಚಿತ ಬಸ್ ಸೇವೆಯನ್ನು ಒದಗಿಸಿದೆ. ಗ್ರಾಮದ ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಪಂಚಾಯ್ತಿ ಹೊಸ ಬಸ್ ಖರೀದಿಸಿದೆ.
ಈ ಬಸ್ ಸೌಕರ್ಯದಿಂದ ಶಿಕ್ಷಣ ವಂಚಿತರಾಗಿದ್ದ ವಿದ್ಯಾರ್ಥಿನಿಯರು ಇದೀಗ ಇದೀಗ ಕಾಲೇಜಿನತ್ತ ಮುಖ ಮಾಡುತ್ತಿದ್ದಾರೆ. ಗ್ರಾಮಪಂಚಾಯ್ತಿ ಅಧ್ಯಕ್ಷ ಸಿದ್ದಾರೂಢರು ವಿಶೇಷ ಆಸ್ಥೆ ವಹಿಸಿ ಪಂಚಾಯತ್ ಅನುದಾನದಲ್ಲಿ 2 ತಿಂಗಳ ಹಿಂದೆ ಈ ಬಸ್ ವ್ಯವಸ್ಥೆ ಮಾಡಿಸಿ ಕೊಟ್ಟಿದ್ದಾರೆ. ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ. ಇದರಿಂದಾಗಿ ಇಲ್ಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ನಿರಾಳರಾಗಿ ಆಳಂದ ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕೆ ಹೋಗಿ ಬರುತ್ತಿದ್ದಾರೆ.
Advertisement
Advertisement
ಸದ್ಯ ಮೂರು ತಿಂಗಳ ಮಟ್ಟಿಗೆ ಈ ಬಸ್‍ನ ಸೌಕರ್ಯವನ್ನು ವಿದ್ಯಾರ್ಥಿನಿಯರಿಗೆ ಕಲ್ಪಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕರೆ ಮುಂಬರುವ ದಿನಗಳಲ್ಲಿ ಇದನ್ನು ಮುಂದುವರೆಸಿಕೊಂಡು ಹೋಗಲು ಪಂಚಾಯ್ತಿ ಸದಸ್ಯರು ಚಿಂತನೆ ನಡೆಸಿದ್ದಾರೆ.