– ಫೆ.10ರಿಂದಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸಂಬಂಧ ಸಲಹಾ ಸಭೆ
ಬೆಂಗಳೂರು: ಗ್ರೇಟರ್ ಬೆಂಗಳೂರು (Greater Bengaluru) ಆಡಳಿತ ವಿಧೇಯಕ-2024ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ 8 ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆ ಸ್ವೀಕರಿಸುವ ಸಭೆಗಳನ್ನು ಆಯೋಜನೆ ಮಾಡಲಾಗುತ್ತಿದೆ.
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಹರ್ಷದ್ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಬಸ್ – 18 ಪ್ರಯಾಣಿಕರು ಗ್ರೇಟ್ ಎಸ್ಕೇಪ್
Advertisement
Advertisement
ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿಯಾದ, ಸಹಭಾಗಿತ್ವದ ಮತ್ತು ಸ್ಪಂದನಾಶೀಲ ಆಡಳಿತಕ್ಕಾಗಿ, ನಗರಾಡಳಿತದ ಮೂಲಕ ಘಟಕಗಳನ್ನಾಗಿಸುವುದಕ್ಕೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸುವುದಕ್ಕೆ ಹಾಗೂ ಸಹಭಾಗಿ, ದಕ್ಷ ಮತ್ತು ನ್ಯಾಯೋಚಿತ ಆಡಳಿತದ ಚೌಕಟ್ಟನ್ನು ಸ್ಥಾಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಜಾರಿಗೆ ತರಲಾಗುತ್ತಿದೆ.
Advertisement
ಮುಂದುವರಿದು, ಮೇಲ್ಕಂಡ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಸಲುವಾಗಿ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಸದರಿ ಸಮಿತಿಯು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲಿದ್ದು, ವಲಯವಾರು ಸಭೆಗಳನ್ನು ಆಯೋಜಿಸಲಾಗಿದೆ. ಅದರ ವಿವರ ಈ ಕೆಳಕಂಡತಿದೆ.
Advertisement
ಪೂರ್ವ ವಲಯ:
ಪೂರ್ವ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ವಸಂತನಗರ ತಿಮ್ಮಯ್ಯ ರಸ್ತೆಯಲ್ಲಿ ಬರುವ ಬಂಜಾರ ಭವನದಲ್ಲಿ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: ನಾಳೆಯಿಂದ ಏರೋ ಇಂಡಿಯಾ ಶೋ – ಬಾನಂಗಳದಲ್ಲಿ ಮೋಡಿ ಮಾಡಲಿವೆ ಲೋಹದ ಹಕ್ಕಿಗಳು
ಮಹದೇವಪುರ ವಲಯ:
ಮಹದೇವಪುರ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ಕೆ.ಆರ್ ಪುರ ಟಿಸಿ ಪಾಳ್ಯದ ಹತ್ತಿರವಿರುವ ಕೇಂಬ್ರಿಡ್ಜ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.
ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯ:
ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಜೆ.ಪಿ ನಗರ 1ನೇ ಹಂತದಲ್ಲಿ ಬರುವ ಆರ್.ವಿ ಡೆಂಟಲ್ ಕಾಲೇಜಿನಲ್ಲಿ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.
ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯ:
ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಬೆಂಗಳೂರು ವಿಶ್ವವಿದ್ಯಾನಿಲಯ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಡಾ.ಹೆಚ್ ನರಸಿಂಹತ್ತ ಸಭಾಂಗಣದಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್ ಸಂಕಷ್ಟ – ಎಸಿಪಿ ಚಂದನ್‌ಗೆ ಹೆಗಲಿಗೆ ತನಿಖೆ ಹೊಣೆ
ಯಲಹಂಕ ಹಾಗೂ ದಾಸರಹಳ್ಳಿ ವಲಯ:
ಯಲಹಂಕ ಹಾಗೂ ದಾಸರಹಳ್ಳಿ ವಲಯ ಸೇರಿದಂತೆ 12ನೇ ಫ್ರೆಬ್ರವರಿ 2025 ರಂದು ಯಲಹಂಕ ನ್ಯೂಟೌನ್ ನಲ್ಲಿ ಬರುವ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 3 ದಿನಗಳ ಕಾಲ 5 ಕಡೆ ಪಾಲಿಕೆಯ ಎಲ್ಲಾ ಎಂಟು ವಲಯಗಳಿಗೆ ಸಂಬಂಧಿಸಿಂತೆ ಸಭೆ ನಡೆಯಲಿದ್ದು, ಈ ಸಭೆ ಸ್ಥಳೀಯ ನಾಗರೀಕರು, ಸಂಘ ಸಂಸ್ಥೆಗಳು ಹಾಗು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹೆಚ್ಚಿನ ಸಮಖ್ಯೆಯಲ್ಲಿ ಆಗಮಿಸಿ ತಮ್ಮ ಅತ್ಯಮೂಲ್ಯವಾದ ಸಲಹೆಗಳನ್ನು ನೀಡಲು ಕೋರಿದೆ.