– ಖಾಲಿ ಕೊಡಗಳನ್ನು ಹಿಡಿದು ನಗರಸಭೆ ಎದುರು ಪ್ರತಿಭಟನೆ
ಗದಗ: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗನಲ್ಲಿ (Gadag) ನಡೆದಿದೆ.
ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಿಂದ ನಗರಸಭೆ ಕಚೇರಿವರೆಗೆ ಖಾಲಿ ಕೊಡ ಹಿಡಿದು ಪ್ರತಿಭಟನಾ ರ‍್ಯಾಲಿ ನಡೆಯಿತು. ಬಳಿಕ ಪ್ರತಿಭಟನಾಕಾರರು ನಗರಸಭೆ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದರು. ಇದನ್ನೂ ಓದಿ: ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಗೇಟ್‌ಗೆ ಬೀಗ ಹಾಕಿ, ಮುಂದೆ ಬ್ಯಾರಿಕೇಡ್ ಇಟ್ಟು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಸ್ಥಳದಲ್ಲಿ 3 ಜನ ಡಿವೈಎಸ್ಪಿ, 4 ಜನ ಸಿಪಿಐ, 10 ಜನ ಪಿಎಸ್‌ಐ, 15 ಎಎಸ್‌ಐ ಸೇರಿದಂತೆ ನೂರಾರು ಜನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಭಟನಾಕಾರರು ಒಳಹೋಗದಂತೆ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ನಂತರ ನಗರಸಭೆ ಕಚೇರಿ ಗೇಟ್ ಮುಂದೆ ಖಾಲಿ ಕೊಡಗಳೊಂದಿಗೆ ಕುಳಿತು ಪ್ರತಿಭಟನೆ ಮುಂದುವರಿಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಹಾಗೂ ಸಂಬಂಧಿಸಿ ಅಧಿಕಾರಿಗಳು ಆಗಮಿಸಿ ಪರಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಇದನ್ನೂ ಓದಿ: ಮಿಗ್-21 ಯುದ್ಧ ವಿಮಾನದ 62 ವರ್ಷಗಳ ಸೇವೆಗೆ ವಿದಾಯ – ಸೆ. 19ರಂದು ಬೀಳ್ಕೊಡುಗೆ ಸಮಾರಂಭ
ಕಳೆದ 50 ವರ್ಷಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ನೀರಿನ ಸಮಸ್ಯೆ ಮುಂದುವರಿದಿದ್ದು, ನಗರಸಭೆ ಸದಸ್ಯರು ವಾರ್ಡಿನ ಸಾರ್ವಜನಿಕರಿಂದ ನಿತ್ಯ ಪೇಚಾಟ ಅನುಭವಿಸುವಂತಾಗಿದೆ. ಇದಕ್ಕೆ ಪರಿಹಾರವೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಭೆ ನಡೆಸಿ ಚರ್ಚಿಸೋಣ. 5 ಜನ ಮುಖಂಡರು ಸಭೆಗೆ ಬನ್ನಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಇದಕ್ಕೆ ಪ್ರತಿಭಟನಾಕಾರರು 5 ಜನ ಆಗುವುದಿಲ್ಲ, ಎಲ್ಲ ಸದಸ್ಯರನ್ನು ಸಭೆ ಕರೆಯಿರಿ ಎಂದು ಪಟ್ಟುಹಿಡಿದರು.
ಕಳೆದ 50 ವರ್ಷದಿಂದ ಅವಳಿ ನಗರಕ್ಕೆ ನೀರು ಪೂರೈಕೆ ಆಗುತ್ತಿಲ್ಲ. ಮಳೆಗಾಲದಲ್ಲೂ ನೀರು ಪೂರೈಕೆ ಮಾಡದ ಶಾಸಕರು, ಸಚಿವರು ನಮಗೆ ಬೇಡ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್, ನಗರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.