ಶಿವಮೊಗ್ಗ: ರಾಜ್ಯದ ಜನರ ಮನದಲ್ಲಿ ಮನೆ ಮಾತಾಗಿರುವ ನಿಮ್ಮ ಪಬ್ಲಿಕ್ ಟಿವಿಗೆ ದಶಮಾನೋತ್ಸವ ಸಂಭ್ರಮ. ಪಬ್ಲಿಕ್ ಟಿವಿ ವಾಹಿನಿ ಆರಂಭವಾಗಿ 10 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮುನ್ನುಗುತ್ತಿದ್ದು, ದಶಮಾನೋತ್ಸವ ಸಂಭ್ರಮವನ್ನು ವನಮಹೋತ್ಸವ ಆಚರಿಸುವ ಮೂಲಕ ವಿಭಿನ್ನವಾಗಿ ಆಚರಿಸಿದೆ.
ದಶಮಾನೋತ್ಸವ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವನಮಹೋತ್ಸವವಾಗಿ ಆಚರಿಸಲು ಪಬ್ಲಿಕ್ ಟಿವಿ ಆಡಳಿತ ಮಂಡಳಿ ನಿರ್ಧರಿಸಿದೆ. ಅದರಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದೆ. ಇದರ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಯೋ ಡೈವರ್ಸಿಟಿ ಪಾರ್ಕ್ ಆವರಣದಲ್ಲಿ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದನ್ನೂ ಓದಿ: ಸಿದ್ದಗಂಗಾ ಮಠದಲ್ಲಿ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಕ್ಕೆ ಚಾಲನೆ
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಹಾಗು ರೋಟರಿ ಕ್ಲಬ್ ಸದಸ್ಯರು ಭಾಗವಹಿಸಿ ಗಿಡ ನೆಡುವ ಮೂಲಕ ಪಬ್ಲಿಕ್ ಟಿವಿಗೆ ಹಾಗೂ ವಾಹಿನಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರಿಗೆ ಶುಭಾಶಯ ಕೋರಿದರು. ಇದನ್ನೂ ಓದಿ: ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು
ಕೋವಿಡ್ ಸಂದರ್ಭದಲ್ಲಿ ಶಾಲೆಗಳು ಬಂದ್ ಆಗಿದ್ದ ವೇಳೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿ ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡಿತ್ತು. ಪಬ್ಲಿಕ್ ಟಿವಿಯ ಈ ಕಾರ್ಯಕ್ಕೆ ರಾಜ್ಯದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಪಬ್ಲಿಕ್ ಟಿವಿಯ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪರಿಸರದ ಬಗ್ಗೆ ವಾಹಿನಿಗೆ ಇರುವ ಕಾಳಜಿಯನ್ನು ತೋರಿಸುತ್ತಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.