ಬೆಂಗಳೂರು: ಊಹೆ ಮಾಡಿ ಸುದ್ದಿ ಹೇಳಿದರೆ, ಚಾನೆಲ್ ನಂಬಿಕೆ ಕಡಿಮೆ ಆಗುತ್ತದೆ ಎಂದು ಬಿಜೆಪಿ ಮುಖಂಡ ಅಶ್ವತ್ಥನಾರಾಯಣ ಹೇಳಿದ್ದಾರೆ.
ಸ್ಪೆಷಲ್ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವೊಮ್ಮೆ ಊಹೆಯ ಆಧಾರದಲ್ಲಿ ಸುದ್ದಿಯನ್ನು ಪ್ರಸಾರ ಮಾಡುತ್ತೀರಿ. ನಿಮ್ಮ ಊಹೆ ಸರಿಯಾದರೆ ಓಕೆ ಆದರೆ ಕೆಲವೊಮ್ಮೆ ಆ ರೀತಿ ಆಗಿರುವುದಿಲ್ಲ. ಊಹೆ ಸತ್ಯಕ್ಕೆ ಹತ್ತಿರವಾಗಿ ಇದ್ದಾಗ ಪಕ್ಕಾ ಮಾಡಿಕೊಂಡು ಹೇಳಬೇಕು ಎಂದು ಸಲಹೆ ನೀಡಿದರು.
Advertisement
ಮಹದಾಯಿ, ಕಾವೇರಿ ಗಲಾಟೆ, ಸರ್ಜಿಕಲ್ ಸ್ಟ್ರೈಕ್ ಜೊತೆಗೆ ಗಣರಾಜ್ಯೋತ್ಸವ ಪರೇಡ್ ವೇಳೆ ನೀಡಿದ ವಿಶ್ಲೇಷಣೆ ಉತ್ತಮವಾಗಿತ್ತು ಎಂದು ಹೇಳಿದರು.
Advertisement
ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ರಂಗನಾಥ್, ಪ್ರಜಾಪ್ರಭುತ್ವದಲ್ಲಿ ನಾವು ಪ್ರಶ್ನಾತೀತರಲ್ಲ. ನಾವು ಹೇಗೆ ಪ್ರಶ್ನೆ ಮಾಡುತ್ತೇವೋ ಅದೇ ರೀತಿಯಾಗಿ ನಮ್ಮನ್ನು ಜನ ಪ್ರಶ್ನೆ ಮಾಡಬೇಕು. ಇಲ್ಲಿ ಪಬ್ಲಿಕ್ ಟಿವಿಯನ್ನು ಹೊಗಳಿ ಮಾತನಾಡಬಾರದು, ನಮ್ಮ ತಪ್ಪುಗಳನ್ನು ತೋರಿಸಿ ಟೀಕಿಸಬೇಕು ಎಂದು ಅತಿಥಿಗಳಲ್ಲಿ ಕೇಳಿಕೊಂಡಿದ್ದರು.
Advertisement
ಸಂವಾದದ ಕೊನೆಯಲ್ಲಿ ಎಲ್ಲ ಅತಿಥಿಗಳ ಪ್ರಶ್ನೆಗೆ ಉತ್ತರಿಸಿದ ರಂಗನಾಥ್, ನಿಮ್ಮೆಲ್ಲರ ಸಲಹೆಯನ್ನು ಪರಿಗಣಿಸಿದ್ದೇನೆ. ನಾಳೆಯಿಂದಲೇ ನಿಮ್ಮ ಸಲಹೆಗಳು ಜಾರಿ ಆಗುತ್ತದೆ ಎಂದು ಹೇಳಲಾರೆ. ಆದರೆ ಮುಂದಿನ ದಿನಗಳಲ್ಲಿ ನೀವು ಪಬ್ಲಿಕ್ ಟಿವಿಯಲ್ಲಿ ಬದಲಾವಣೆಯನ್ನು ಕಾಣಲಿದ್ದೀರಿ ಎಂದು ತಿಳಿಸಿದರು.
Advertisement
ಈ ವಿಶೇಷ ಕಾರ್ಯಕ್ರಮದಲ್ಲಿ ಮಾಜಿ ಅಡ್ವೋಕೇಟ್ ಜನರಲ್ ಬಿವಿ ಆಚಾರ್ಯ, ಹಿರಿಯ ಪತ್ರಕರ್ತ ಸತ್ಯನಾರಾಯಣ, ನಟ ಮುಖ್ಯಮಂತ್ರಿ ಚಂದ್ರು, ಹಿರಿಯ ನಟಿ ಅರುಂಧತಿ ನಾಗ್, ನಿವೃತ್ತ ಡಿಜಿ, ರೇವಣ ಸಿದ್ದಯ್ಯ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್, ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ದ್ವಾರಕನಾಥ್, ಜೆಡಿಎಸ್ ಶಾಸಕ ಕೋನ ರೆಡ್ಡಿ, ಉತ್ತರ ಕರ್ನಾಟಕ ನಿವಾಸಿಗಳ ಸಂಘದ ಅಧ್ಯಕ್ಷ ಚಂದ್ರೇಶಖರ್ ಸಾಂಬ್ರಾಣಿ, ಮಹಿಳಾ ಹೋರಾಟಗಾರ್ತಿ ವಿಮಲಾ ಅತಿಥಿಗಳಾಗಿ ಭಾಗವಹಿಸಿದ್ದರು.