ಬೆಂಗಳೂರು: ಸುದ್ದಿಯಲ್ಲಿ ವಾಖ್ಯಾನ ನೀಡುವುದು ಎಷ್ಟು ಸರಿ ಎಂದು ಮುಖ್ಯಮಂತ್ರಿ ಚಂದ್ರು ಅವರು ರಂಗನಾಥ್ ಅವರನ್ನು ಪ್ರಶ್ನಿಸಿದ್ದಾರೆ.
ವಿಶೇಷ ಬಿಗ್‍ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುದ್ದಿಯನ್ನು ಸುದ್ದಿಯಾಗಿ ಓದಬೇಕು. ವಾಖ್ಯಾನ ಮಾಡಬೇಕು ಎಂದಿದ್ದರೆ ನೀವು ಸಂವಾದಕ್ಕೆ ಬರಬೇಕು. ಸುದ್ದಿಯಲ್ಲಿ ವಾಖ್ಯಾನ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.
Advertisement
ಐದು ವರ್ಷಗಳಿಂದ ನಾವು ನೋಡಿಕೊಂಡು ಬಂದಿದ್ದೇವೆ. ಆದರೆ ಪಬ್ಲಿಕ್ ಟಿವಿ ರಂಗನಾಥ್ ಟಿವಿ ಆಗಿದೆ. ಈ ರೀತಿ ಆಗಬಾರದು ಎಂದು ಅಭಿಪ್ರಾಯ ಪಟ್ಟರು.
Advertisement
ಜನಪ್ರಿಯತೆ ಜಾಸ್ತಿ ಆಗುತ್ತಿದ್ದಂತೆ ಜಾವಾಬ್ದಾರಿ ಜಾಸ್ತಿ ಆಗುತ್ತದೆ. ಹೊಗಳಿಕೆ ಬಂದಾಗ ಏರಬಾರದು. ನಿರಂತರವಾಗಿ ಜನಪ್ರಿಯತೆಯನ್ನು ಉಳಿಸಿಕೊಳ್ಳುವುದು ಕಷ್ಟ. ಈ ರೀತಿಯ ಜನಪ್ರಿಯತೆಯನ್ನು ಉಳಿಸಿಕೊಂಡವರು ಅಂದರೆ ಅದು ಡಾ. ರಾಜ್‍ಕುಮಾರ್ ಮಾತ್ರ. ಅಣ್ಣಾವ್ರು ಮೃತಪಟ್ಟ ಬಳಿಕವೂ ಜನಪ್ರಿಯ ವ್ಯಕ್ತಿಯಾಗಿ ಈಗಲೂ ಇದ್ದಾರೆ ಎಂದು ತಿಳಿಸಿದರು.
Advertisement
ಇದೇ ವೇಳೆ ಮೂಲಭೂತ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಜನರಿಗೆ ಮಾಹಿತಿ ನೀಡುವಂತಹ ಕಾರ್ಯಕ್ರಮಗಳು ಮೂಡಿಬರಬೇಕು ಎಂದು ಸಲಹೆ ನೀಡಿದರು.
Advertisement
ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ರಂಗನಾಥ್, ಪ್ರಜಾಪ್ರಭುತ್ವದಲ್ಲಿ ನಾವು ಪ್ರಶ್ನಾತೀತರಲ್ಲ. ನಾವು ಹೇಗೆ ಪ್ರಶ್ನೆ ಮಾಡುತ್ತೇವೋ ಅದೇ ರೀತಿಯಾಗಿ ನಮ್ಮನ್ನು ಜನ ಪ್ರಶ್ನೆ ಮಾಡಬೇಕು. ಇಲ್ಲಿ ಪಬ್ಲಿಕ್ ಟಿವಿಯನ್ನು ಹೊಗಳಿ ಮಾತನಾಡಬಾರದು, ನಮ್ಮ ತಪ್ಪುಗಳನ್ನು ತೋರಿಸಿ ಟೀಕಿಸಬೇಕು ಎಂದು ಅತಿಥಿಗಳಲ್ಲಿ ಕೇಳಿಕೊಂಡಿದ್ದರು.
ಸಂವಾದದ ಕೊನೆಯಲ್ಲಿ ಎಲ್ಲ ಅತಿಥಿಗಳ ಪ್ರಶ್ನೆಗೆ ಉತ್ತರಿಸಿದ ರಂಗನಾಥ್, ನಿಮ್ಮೆಲ್ಲರ ಸಲಹೆಯನ್ನು ಪರಿಗಣಿಸಿದ್ದೇನೆ. ನಾಳೆಯಿಂದಲೇ ನಿಮ್ಮ ಸಲಹೆಗಳು ಜಾರಿ ಆಗುತ್ತದೆ ಎಂದು ಹೇಳಲಾರೆ. ಆದರೆ ಮುಂದಿನ ದಿನಗಳಲ್ಲಿ ನೀವು ಪಬ್ಲಿಕ್ ಟಿವಿಯಲ್ಲಿ ಬದಲಾವಣೆಯನ್ನು ಕಾಣಲಿದ್ದೀರಿ ಎಂದು ತಿಳಿಸಿದರು.
ಈ ವಿಶೇಷ ಕಾರ್ಯಕ್ರಮದಲ್ಲಿ ಮಾಜಿ ಅಡ್ವೋಕೇಟ್ ಜನರಲ್ ಬಿವಿ ಆಚಾರ್ಯ, ಹಿರಿಯ ಪತ್ರಕರ್ತ ಸತ್ಯನಾರಾಯಣ, ಹಿರಿಯ ನಟಿ ಅರುಂಧತಿ ನಾಗ್, ನಿವೃತ್ತ ಡಿಜಿ, ರೇವಣ ಸಿದ್ದಯ್ಯ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್, ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ದ್ವಾರಕನಾಥ್, ಬಿಜೆಪಿ ಮುಖಂಡ ಅಶ್ವತ್ಥ ನಾರಾಯಣ, ಉತ್ತರ ಕರ್ನಾಟಕನಿವಾಸಿಗಳ ಸಂಘದ ಅಧ್ಯಕ್ಷ ಚಂದ್ರೇಶಖರ್ ಸಾಂಬ್ರಾಣಿ, ಮಹಿಳಾ ಹೋರಾಟಗಾರ್ತಿ ವಿಮಲಾ ಅತಿಥಿಗಳಾಗಿ ಭಾಗವಹಿಸಿದ್ದರು.