ಬೆಂಗಳೂರು: ಕೆಲವೊಮ್ಮೆ ನೀವೇ ಹಿಂಸೆಗೆ ಕರೆಕೊಟ್ಟಂತೆ ಅನಿಸುತ್ತದೆ ಎಂದು ನಿವೃತ್ತ ನಿವೃತ್ತ ಡಿಜಿಪಿ ರೇವಣ ಸಿದ್ದಯ್ಯ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯ 5ನೇ ವರ್ಷದ ಸಂಭ್ರಮದ ಸಂಭ್ರಮದಲ್ಲಿ ನಡೆದ ಸ್ಪೆಷಲ್ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದ ಅವರು, ಕೆಲ ಸಂದರ್ಭದಲ್ಲಿ ಆಕ್ರೋಶ ಬೇಕು, ನಿರ್ಭಯವಾಗಿ ಹೇಳಬೇಕು. ಆದರೆ ಕೆಲವೊಮ್ಮೆ ಬುಲೆಟಿನ್‍ನಲ್ಲಿ ಹಿಂಸೆಗೆ ಕರೆಕೊಟ್ಟಂತೆ ಪ್ರಚೋದನೆ ನೀಡಿದಂತೆ ಅನಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Advertisement
ಕ್ರೈಂ ರಿರ್ಪೋಟರ್ ಆಗಿದ್ದಾಗ ಜಾಸ್ತಿ ಪ್ರಶ್ನೆ ಕೇಳಿ ಪೊಲೀಸರ ಕಾಲನ್ನು ನೀವು ಎಳೆಯುತ್ತಿದ್ದ ವಿಚಾರ ನನಗೆ ಗೊತ್ತಿದೆ. ಆದರೆ ಇಲ್ಲಿ ವ್ಯಕ್ತಿಗಳು ರಂಗನಾಥ್ ಸಾಹೆಬ್ರೆ ಎಂದು ಹೇಳುತ್ತಿದ್ದರೂ ನೀವು ಅವರ ಅಭಿಪ್ರಾಯವನ್ನು ಪೂರ್ಣವಾಗಿ ಹೇಳಲು ಬಿಡುವುದಿಲ್ಲ ಯಾಕೆ ಎಂದು ಪ್ರಶ್ನಿಸಿದರು.
Advertisement
ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ರಂಗನಾಥ್, ಪ್ರಜಾಪ್ರಭುತ್ವದಲ್ಲಿ ನಾವು ಪ್ರಶ್ನಾತೀತರಲ್ಲ. ನಾವು ಹೇಗೆ ಪ್ರಶ್ನೆ ಮಾಡುತ್ತೇವೋ ಅದೇ ರೀತಿಯಾಗಿ ನಮ್ಮನ್ನು ಜನ ಪ್ರಶ್ನೆ ಮಾಡಬೇಕು. ಇಲ್ಲಿ ಪಬ್ಲಿಕ್ ಟಿವಿಯನ್ನು ಹೊಗಳಿ ಮಾತನಾಡಬಾರದು, ನಮ್ಮ ತಪ್ಪುಗಳನ್ನು ತೋರಿಸಿ ಟೀಕಿಸಬೇಕು ಎಂದು ಅತಿಥಿಗಳಲ್ಲಿ ಕೇಳಿಕೊಂಡಿದ್ದರು.
Advertisement
ಸಂವಾದದ ಕೊನೆಯಲ್ಲಿ ಎಲ್ಲ ಅತಿಥಿಗಳ ಪ್ರಶ್ನೆಗೆ ಉತ್ತರಿಸಿದ ರಂಗನಾಥ್, ನಿಮ್ಮೆಲ್ಲರ ಸಲಹೆಯನ್ನು ಪರಿಗಣಿಸಿದ್ದೇನೆ. ನಾಳೆಯಿಂದಲೇ ನಿಮ್ಮ ಸಲಹೆಗಳು ಜಾರಿ ಆಗುತ್ತದೆ ಎಂದು ಹೇಳಲಾರೆ. ಆದರೆ ಮುಂದಿನ ದಿನಗಳಲ್ಲಿ ನೀವು ಪಬ್ಲಿಕ್ ಟಿವಿಯಲ್ಲಿ ಬದಲಾವಣೆಯನ್ನು ಕಾಣಲಿದ್ದೀರಿ ಎಂದು ತಿಳಿಸಿದರು.
Advertisement
ಈ ವಿಶೇಷ ಕಾರ್ಯಕ್ರಮದಲ್ಲಿ ಮಾಜಿ ಅಡ್ವೋಕೇಟ್ ಜನರಲ್ ಬಿವಿ ಆಚಾರ್ಯ, ಹಿರಿಯ ಪತ್ರಕರ್ತ ಸತ್ಯನಾರಾಯಣ, ನಟ ಮುಖ್ಯಮಂತ್ರಿ ಚಂದ್ರು, ಹಿರಿಯ ನಟಿ ಅರುಂಧತಿ ನಾಗ್, ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್, ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ದ್ವಾರಕನಾಥ್, ಬಿಜೆಪಿ ಮುಖಂಡ ಅಶ್ವತ್ಥ ನಾರಾಯಣ, ಉತ್ತರ ಕರ್ನಾಟಕನಿವಾಸಿಗಳ ಸಂಘದ ಅಧ್ಯಕ್ಷ ಚಂದ್ರೇಶಖರ್ ಸಾಂಬ್ರಾಣಿ, ಮಹಿಳಾ ಹೋರಾಟಗಾರ್ತಿ ವಿಮಲಾ ಅತಿಥಿಗಳಾಗಿ ಭಾಗವಹಿಸಿದ್ದರು.