ಬೆಂಗಳೂರು: ಸೋಮವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ನಡೆದ 2018ರ ವರ್ಷದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಬ್ಲಿಕ್ ಟಿವಿಯ ರಾಜಕೀಯ ವಿಭಾಗದ ಮುಖ್ಯಸ್ಥ ಬದ್ರುದ್ದೀನ್.ಕೆ.ಮಾಣಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಮಾರಂಭದಲ್ಲಿ ನಗರಾಭಿವೃದ್ದಿ ಸಚಿವ ಜಿ ಪರಮೇಶ್ವರ್ ಮತ್ತು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಸೇರಿದಂತೆ ಪತ್ರಿಕೋದ್ಯಮದ ಎಲ್ಲಾ ಹಿರಿಯ ಪತ್ರಕರ್ತರು ಭಾಗಿಯಾಗಿದ್ದರು. ಇದೇ ವೇಳೆ ಸಚಿವ ಜಿ. ಪರಮೇಶ್ವರ್ ಮತ್ತು ಸುಧಾಮೂರ್ತಿ ಅವರಿಗೆ ಸನ್ಮಾನ ಮಾಡಲಾಯಿತು. ಹಾಗೆಯೇ ಸಚಿವ ಜಿ ಪರಮೇಶ್ವರ್ ಮತ್ತು ಸುಧಾಮೂರ್ತಿ ಅವರು ಸಾಧನೆ ಮಾಡಿರುವ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.
Advertisement
Advertisement
ಪಬ್ಲಿಕ್ ಟಿವಿಯ ಬದ್ರುದ್ದೀನ್ ಕೆ. ಮಾಣಿ, ಕೆ.ಎನ್ ತಿಲಕ್ ಕುಮಾರ್, ರವಿ ಹೆಗಡೆ, ಕೆ.ಎಸ್.ಸಚ್ಚಿದಾನಂದ ಮೂರ್ತಿ (ಸಚ್ಚಿ), ತಿಮ್ಮಪ್ಪ ಭಟ್, ಎ.ಬಾಲಚಂದ್ರ, ವೆಂಕಟನಾರಾಯಣ, ರಾಮಣ್ಣ ಎಚ್. ಕೋಡಿ ಹೊಸಹಳ್ಳಿ, ತುಂಗಾ ರೇಣುಕ, ಕೆ.ವಿ.ಪ್ರಭಾಕರ್, ಡಿ.ಸಿ.ನಾಗೇಶ್, ರಾಜಶೇಖರ ಹತ್ ಗುಂದಿ, ವೇದಂ ಜಯಶಂಕರ್, ರಾಜಶೇಖರ ಅಬ್ಬೂರು, ಶಿವಾಜಿ ಗಣೇಶನ್ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
Advertisement
Advertisement
ಪ್ರಶಸ್ತಿ ಸ್ವೀಕರಿಸಿದ ಮಾತನಾಡಿದ ಬದ್ರುದ್ದೀನ್ ಕೆ. ಮಾಣಿ, ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಿದರಿಂದ ನನ್ನ ಜವಾಬ್ದಾರಿ ಹೆಚ್ಚಾದಂತೆ ಅನಿಸುತ್ತಿದೆ. ಈ ಪ್ರಶಸ್ತಿಯನ್ನು ದೃಶ್ಯ ಮಾಧ್ಯಮದ ನನ್ನ ಎಲ್ಲಾ ಗೆಳೆಯರಿಗೆ ಸಮರ್ಪಿಸುತ್ತೇನೆ. ನನ್ನನ್ನು ಗುರುತಿಸಿ ಬೆಳೆಸಿದಂತಹ ಪಬ್ಲಿಕ್ ಟಿವಿಗೆ ನಾನು ಆಭಾರಿಯಾಗಿದ್ದೇನೆ. ಕಳೆದ ನಾಲ್ಕು ವರ್ಷದಿಂದ ರಾಜಕೀಯ ವಿಭಾಗದಲ್ಲಿ ನನಗೆ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ಈ ಪ್ರಶಸ್ತಿಯು ನನ್ನ ಪಬ್ಲಿಕ್ ಟಿವಿ ಸಂಸ್ಥೆಗೂ ಸಲ್ಲುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv