ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು (Press Club Of Bengaluru) ವತಿಯಿಂದ `ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪಬ್ಲಿಕ್ ಟಿವಿ (Public TV) ಮುಖ್ಯ ಸಂಪಾದಕ ಸಿ.ದಿವಾಕರ್ (C Divakar) ಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (mallikarjun Kharge) ಅವರಿಗೆ ನಿವೃತ್ತ ನ್ಯಾಯಮೂರ್ತಿ ಡಾ.ವಿ ಗೋಪಾಲಗೌಡ ಪ್ರಶಸ್ತಿ ಪ್ರದಾನ ಮಾಡಿದ್ರು. ಸಚಿವ ಮುರುಗೇಶ್ ನಿರಾಣಿ (Murugesh Nirani) ಹಾಗೂ ಎಸ್.ಟಿ ಸೋಮಶೇಖರ್ (ST Somashekhar) ಗೂ ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಯ್ತು.
ಇನ್ನು ಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಸಿ.ದಿವಾಕರ್ ಜೊತೆಗೆ ಮಾಧ್ಯಮ ವಿಭಾಗದ 32 ಸಾಧಕರು ಈ ವರ್ಷದ ಪ್ರಶಸ್ತಿಗೆ ಭಾಜನರಾದ್ರು. ಇದನ್ನೂ ಓದಿ: ಸಿಎಂ ಮುಖಾಂತರ ಕೊನೆಗೂ ಅಮಿತ್ ಶಾ ಭೇಟಿಯಾದ ರಮೇಶ್ ಜಾರಕಿಹೊಳಿ!