ಬೆಂಗಳೂರು: ಮುಂದಿನ ತಿಂಗಳಿನಿಂದಲೇ ರಾಜ್ಯದ ತೃತೀಯ ಲಿಂಗಿಗಳಿಗೆ (Third Gender) ಗೃಹಲಕ್ಷ್ಮೀ ಹಣ ನೀಡಲಾಗುತ್ತದೆ. ಈಗಾಗಲೇ ಅರ್ಜಿ ಸಹ ಸಿದ್ಧವಾಗುತ್ತಿದ್ದು, ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ನೀಡಿ ಗೃಹಲಕ್ಷ್ಮಿ (Gruhalakshmi Scheme) ಹಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಏನೆಲ್ಲಾ ದಾಖಲೆಗಳ ಅಗತ್ಯವಿದೆ? ಅರ್ಜಿ ಸಲಿಸುವುದು ಹೇಗೆ ಅನ್ನೋ ಮಾಹಿತಿ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ..
ರಾಜ್ಯ ಸರ್ಕಾರದ (Karnataka Govt) ಮಹತ್ವಕಾಂಕ್ಷೆ ಯೋಜನೆ ಗೃಹಲಕ್ಷ್ಮಿಯಿಂದ ಬಡ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000 ರೂ. ಸಂದಾಯವಾಗುತ್ತಿದೆ. ಈ ಮಧ್ಯೆ ರಾಜ್ಯ ಸರ್ಕಾರ ಗೃಹಲಕ್ಷಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದೆ. ತೃತೀಯ ಲಿಂಗಿಗಳಿಗೂ ಕೂಡ ಗೃಹಲಕ್ಷ್ಮಿ ಹಣ ನೀಡೋದಕ್ಕೆ ಮುಂದಾಗಿದೆ. ಇದನ್ನೂ ಓದಿ: ಮೋದಿ ಪ್ರಮಾಣವಚನಕ್ಕೆ ವಿದೇಶಿ ಗಣ್ಯರು, ಪೌರಕಾರ್ಮಿಕರು- ಕಾರ್ಯಕ್ರಮಕ್ಕೆ ಯಾರಿಗೆಲ್ಲ ಆಹ್ವಾನ?
ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತೃತೀಯ ಲಿಂಗಿಗಳಿಗೆ ಹಣನೀಡಲು ಆದೇಶ ಆಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನ ಅಭಿವೃದ್ಧಿಪಡಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಇದೇ ತಿಂಗಳ ಕೊನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜಿಲ್ಲಾಧಿಕಾರಿಗಳಿಂದ ತೃತೀಯ ಲಿಂಗಿ ಅಂತ ಪಡೆದ ಗುರುತಿನ ಚೀಟಿ, ಇದ್ದರೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳಿನಿಂದಲೇ ತೃತೀಯ ಲಿಂಗಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.
ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ತೃತೀಯ ಲಿಂಗಿಗಳಿದ್ದು, ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿ0ದೆ. ಈಗಾಗಲೇ 1.20 ಕೋಟಿಗೂ ಅಧಿಕ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬಹುತೇಕರು ಹಣ ಪಡೆಯುತ್ತಿದ್ದಾರೆ. ಈ ಪೈಕಿ ಒಂದೂವರೆ ಲಕ್ಷ ಮಂದಿ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಪಾವತಿದಾರರಾಗಿದ್ದು, ಅವರಿಗೆ ಹಣ ಸಂದಾಯ ಸ್ಥಗಿತ ಮಾಡಲಾಗಿದೆ. ಜೊತೆಗೆ ಮೇ ತಿಂಗಳವರೆಗೂ ಹಣ ಸಂದಾಯ ಆಗಿದ್ದು ಜೂನ್ ತಿಂಗಳ ಹಾಕಬೇಕಿದೆ.
ಒಟ್ಟಾರೆ ಗೃಹಲಕ್ಷ್ಮಿ ಯೋಜನೆಗೆ ತೃತೀಯ ಲಿಂಗಿಗಳು ಕೂಡ ಅರ್ಜಿ ಸಲ್ಲಿಕೆ ಮಾಡಿ ಎರಡು ಸಾವಿರ ಹಣ ಪಡೆಯೋ ವ್ಯವಸ್ಥೆಯನ್ನ ಸರ್ಕಾರ ಮಾಡ್ತಾ ಇದೆ. ಇದನ್ನೂ ಓದಿ: NCP ನಾಯಕ ಪ್ರಫುಲ್ ಪಟೇಲ್‌ಗೆ ಬಿಗ್ ರಿಲೀಫ್ – 180 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿ ಆದೇಶ ರದ್ದು!