Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Public TV Explainer | ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಯಾರಾಗ್ತಾರೆ ಮುಂದಿನ ಸಾರಥಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Public TV Explainer | ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಯಾರಾಗ್ತಾರೆ ಮುಂದಿನ ಸಾರಥಿ?

Districts

Public TV Explainer | ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಯಾರಾಗ್ತಾರೆ ಮುಂದಿನ ಸಾರಥಿ?

Public TV
Last updated: August 3, 2025 12:25 pm
Public TV
Share
5 Min Read
Abhimanyu Elephant
SHARE

ಜಂಬೂ ಸವಾರಿಯಿಲ್ಲದೇ ಮೈಸೂರು ದಸರಾ (Mysuru Dasara) ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಮೈಸೂರು ದಸರಾ ಮಹೋತ್ಸವಕ್ಕೆ ಶತಮಾನಗಳ ಇತಿಹಾಸವಿದೆ. ಈ ದಸರಾ ಮಹೋತ್ಸವದಲ್ಲಿ ಜಂಬೂ ಸವಾರಿ ಅಂದ್ರೆ ಆನೆಗಳೇ ಆಕರ್ಷಣೆ. ಮೈಸೂರು ಮಹಾರಾಜರ ಆಡಳಿತದ ನಂತರವೂ ಆನೆಯ ಮೇಲೆ ಅಂಬಾರಿ ಹೊರುವ ಪರಂಪರೆ ಸಾಗಿ ಬಂದಿದೆ. ಅದೇ ರೀತಿ ಈ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತ ಆನೆಗಳ ಇತಿಹಾಸ ಅಷ್ಟೇ ವಿಸ್ಮಯ. ಹೀಗೆ ಇತಿಹಾಸ ನಿರ್ಮಿಸಿ ಹೋದ ಹಳೆಯ ಆನೆಗಳ ಸಾಲಿನಲ್ಲಿ ಈಗ ಅಭಿಮನ್ಯುವೇ (Abhimanyu Elephant) ಕೊನೆಯವನಾಗಿದ್ದು, ದಶಕಗಳಿಂದ ಈಚೆಗೆ ಬಂದ ಆನೆಗೆ ಅಂಬಾರಿ ಹೊರುವ ಹೊಣೆ ಬಿಟ್ಟುಕೊಡುವ ಕಾಲ ಬಂದೇ ಬಿಟ್ಟಿದೆ.

Contents
  • ಮೊದಲ ಹಂತದಲ್ಲಿ ನಾಡಿಗೆ ಬರಲಿರುವ 9 ಆನೆಗಳು
  • ಮುಂದಿನ ವರ್ಷ ಅಂಬಾರಿ ಹೊತ್ತರೆ ಮುಗಿಯಿತು:
  • ಅಭಿಮನ್ಯು ಹೆಮ್ಮರವಾಗಿ ಬೆಳೆದಿದ್ದು ಹೇಗೆ?
  • ಅಂಬಾರಿ ಹೊತ್ತ ಆನೆಗಳು ಅಜರಾಮರ
  • ಕೆಲ ಆನೆಗಳ ಅಕಾಲಿಕ ಮರಣ
  • ಅಭಿಮನ್ಯು ನಂತರದ ಯಜಮಾನ ಯಾರು?
  • ಅಂಬಾರಿ ಆನೆಗಳ ಸಿನಿಮಾ ನಂಟು

ಹೌದು. ಪ್ರಸಕ್ತ ವರ್ಷದ ದಸರಾ ಮಹೋತ್ಸವಕ್ಕೆ ಭರ್ಜರಿ ತಯಾರಿ ಶುರುವಾಗಿದೆ. ನಾಡಹಬ್ಬ ದಸರಾದ ಐತಿಹಾಸಿಕ ಜಂಬೂ ಸವಾರಿಯಲ್ಲಿ ಈ ಬಾರಿಯೂ 59 ವರ್ಷ ವಯಸ್ಸಿನ ಅಭಿಮನ್ಯು ಆನೆಯೇ ಅಂಬಾರಿ ಹೊರಲಿದೆ. ದಸರಾ ಮಹೋತ್ಸವಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನ ಈಗಾಗಲೇ ಬಿಡುಗಡೆ ಮಾಡಿದ್ದು, ಆಗಸ್ಟ್‌ 4ರಂದು (ಸೋಮವಾರ) ಅವು ಗಜಪಯಣದ ಮೂಲಕ ಅರಮನೆ ಅಂಗಳಕ್ಕೆ ಬಂದಿಳಿಯಲಿವೆ.

abhimanyu team hassan 1

ಮೊದಲ ಹಂತದಲ್ಲಿ ನಾಡಿಗೆ ಬರಲಿರುವ 9 ಆನೆಗಳು

ಮತ್ತಿಗೋಡು ಶಿಬಿರದಲ್ಲಿರುವ ಅಭಿಮನ್ಯು (59 ವರ್ಷ), ಮತ್ತಿಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್‌ (24), ಧನಂಜಯ (44), ಪ್ರಶಾಂತ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40), ದುಬಾರೆ ಶಿಬಿರದ ಕಾವೇರಿ (45/ಹೆಣ್ಣಾನೆ), ಬಳ್ಳೆಯ ಲಕ್ಷ್ಮಿ (53/ಹೆಣ್ಣಾನೆ).

ಮುಂದಿನ ವರ್ಷ ಅಂಬಾರಿ ಹೊತ್ತರೆ ಮುಗಿಯಿತು:

ದಸರಾ ಆನೆಗಳಿಗೂ (Dasara Elephants) ಶತಮಾನದ ನಂಟು ಇದೆ. ಎಲ್ಲೆಡೆ ಹೊಸ ಪೀಳಿಗೆ ಪ್ರವೇಶಿಸಿದಂತೆ ಮೈಸೂರಿನ ಆನೆಗಳಲ್ಲೂ ಬದಲಾವಣೆ ಆಗುತ್ತಿದೆ. ಆದ್ರೆ ಈಗ ಇರುವ ಹಳೆಯ ಆನೆಗಳ ಪೈಕಿ ಅಭಿಮನ್ಯುನೇ ಹಿರಿಯ. 59 ವರ್ಷ ವಯಸ್ಸಿನ ಅಭಿಮನ್ಯು ಮುಂದಿ ವರ್ಷ ಅಂಬಾರಿ ಹೊತ್ತರೆ ಮುಗಿಯಿತು. ಏಕೆಂದರೆ ಅರಣ್ಯ ಅಧಿಕಾರಿಗಳು ಹೇಳುವಂತೆ 60 ವರ್ಷ ತುಂಬಿದ ಆನೆಗಳಿಗೆ ನಿಯಮದಂತೆ ನಿವೃತ್ತಿ ಕೊಡಬೇಕು. ಅಭಿಮನ್ಯುವಿಗೆ ಈಗ 59 ವರ್ಷ ವಯಸ್ಸಾಗಿದ್ದು, ಮುಂದಿನ ವರ್ಷ 60ನೇ ವಯಸ್ಸಿಗೆ ಕಾಲಿಡಲಿದ್ದಾನೆ. ಮುಂದಿನ ವರ್ಷ ಅಂಬಾರಿ ಹೊತ್ತರೆ ಅಲ್ಲಿಗೆ ಅಭಿಮನ್ಯು ಇತಿಹಾಸ ಪುಟ ಸೇರಿಕೊಳ್ಳಲಿದ್ದಾನೆ ಎನ್ನುತ್ತಾರೆ ಡಿಸಿಎಫ್‌ ಪ್ರಭು.

Abhimanyu

ಅಭಿಮನ್ಯು ಹೆಮ್ಮರವಾಗಿ ಬೆಳೆದಿದ್ದು ಹೇಗೆ?

1951ರ ಸಮಯದಲ್ಲಿ ಸುರ್ಗುಜಾ ಮಧ್ಯಪ್ರದೇಶದ ಭಾಗವಾಗಿತ್ತು. ಆದ್ರೆ 2000 ಇಸವಿಯ ನಂತರ ಛತ್ತಿಸ್‌ಘಡದ ಜಿಲ್ಲೆಯಾಗಿ ಸೇರ್ಪಡೆಯಾಯಿತು. ಈ ಸ್ಥಳಕ್ಕೂ ನಮ್ಮ ಕರ್ನಾಟಕಕ್ಕೂ ನಂಟು ಇದೆ. ಅದು ಹೇಗೆ ಅಂತೀರಾ..? ಈ ಹಿಂದೆ ಸುಮಾರು 3 ದಶಕಗಳ ಕಾಲ ಸರ್ಗುಜಾದಲ್ಲಿ ಆನೆಗಳ ಹಾವಳಿ ಮಿತಿ ಮೀರಿತ್ತು. ಆನೆಗಳನ್ನ ಸೆರೆ ಹಿಡಿಯಬೇಕು, ಉಪಟಳ ತಪ್ಪಿಸಬೇಕು ಅನ್ನೋ ಕೂಗು ಸರ್ಗೂಜಾ ಭಾಗದಲ್ಲಿ ಜೋರಾಗಿತ್ತು. ಸ್ಥಳೀಯರ ಒತ್ತಡಕ್ಕೆ ಮಣಿದ ಅಂದಿನ ಮಧ್ಯಪ್ರದೇಶದ ರಾಜ್ಯ ಸರ್ಕಾರ ಆನೆಗಳನ್ನ ಸೆರೆ ಹಿಡಿಯೋದಕ್ಕೇನೋ ಅನುಮತಿ ನೀಡಿತು. ಆದ್ರೆ ಅವುಗಳನ್ನ ಸೆರೆ ಹಿಡಿಯುವ ಕಾರ್ಯಾಚರಣೆ ಅಷ್ಟು ಸುಲಭವಾಗಿರಲಿಲ್ಲ. ಆಗ ಮಧ್ಯಪ್ರದೇಶದ ಚಿತ್ತ ಹಾಯಿಸಿದ್ದು, ಕರ್ನಾಟಕದತ್ತ. ಖೆಡ್ಡಕ್ಕೆ ಕೆಡವುವ ಕಾರ್ಯಾಚರಣೆಯಲ್ಲಿ ಕರ್ನಾಟಕದ ಆನೆಗಳು ಆಗಲೇ ಬಲಶಾಲಿಗಳಾಗಿ ಗುರುತಿಸಿಕೊಂಡಿದ್ದವು. ಇಲ್ಲಿಂದ ಆನೆಗಳನ್ನ ಕರೆದುಕೊಂಡು ಬಂದು ಆನೆಗಳನ್ನ ಸೆರೆಹಿಡಿಯುವ ತೀರ್ಮಾನಕ್ಕೆ ಅಲ್ಲಿನ ಸರ್ಕಾರ ಮುಂದಾಯಿತು. ಅದರಂತೆ ಇಂದಿನ ಅಂಬಾರಿ ಹೊರುವ ಕ್ಯಾಪ್ಟನ್‌ ಅಭಿಮನ್ಯು ಸೇರಿ ಹಲವು ಆನೆಗಳ ತಂಡವನ್ನ ಸರ್ಗುಜಾಕ್ಕೆ ಕರೆದೊಯ್ಯಲಾಯ್ತು. ನೀರಿಕ್ಷೆಯಂತೆ ನಮ್ಮ ಆನೆಗಳು ಸರ್ಗುಜಾದಲ್ಲಿ ಸುಮಾರು 42 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಯಶಸ್ವಿಯಾದವು. ಈ ಆನೆ ಸೆರೆ ಕಾರ್ಯಾಚರಣೆ ಆಗ The Last Migration – Wild Elephant Captureʼ ಸಾಕ್ಷ್ಯಚಿತ್ರವಾಗಿ ರೂಪುಗೊಂಡಿತು. ಇದು ನಮ್ಮ ಅಭಿಮನ್ಯುವಿನ ಮೇಲಿನ ಅಭಿಮಾನ ಹೆಚ್ಚಿಸಿ ಈಗಲೂ ಅಪರೇಷನ್ ಎಂದರೆ ʻಅಭಿಮನ್ಯುʼ ಎನ್ನುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಆದ್ರೆ ಇನ್ನೊಂದು ವರ್ಷ ಕಳೆದರೆ ಆಮೇಲೆ ಅಭಿಮನ್ಯು ಅಂಬಾರಿ ಹೊರುವ ಸೌಭಾಗ್ಯದಿಂದ ದೂರವಾಗಲಿದ್ದಾನೆ ಅನ್ನೋದು ವಿಷಾದನೀಯ.

Abhimanyu elephant publictv

ಅಂಬಾರಿ ಹೊತ್ತ ಆನೆಗಳು ಅಜರಾಮರ

ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಆನೆಗಳು ಭಾಗಿಯಾಗಿವೆ. ಇಂತ ಆನೆಗಳ ಪಟ್ಟಿ ನೂರಕ್ಕೂ ಅಧಿಕ. ಆದ್ರೆ ಅಂಬಾರಿ ಹೊತ್ತ ಆನೆಗಳ ಸಂಖ್ಯೆ ಕಡಿಮೆ. ಇದರಲ್ಲಿ ಶತಮಾನಗಳಷ್ಟು ಹಳೆಯಾದ ಜಯಮಾರ್ತಾಂಡ ಆನೆಯೇ ಅತ್ಯಂತ ಹಿರಿಯ. ಈತನೇ ಅಂಬಾರಿ ಹೊತ್ತ ಮೊದಲಿಗ. ಹಲವಾರು ವರ್ಷ ಮಾರ್ತಾಂಡ ಯಶಸ್ವಿಯಾಗಿ ತನ್ನ ಜವಾಬ್ದಾರಿ ನಿಭಾಯಿಸಿ ಮಹಾರಾಜರ ಪ್ರೀತಿಗೂ ಪಾತ್ರನಾಗಿದ್ದ. ಈಗಲೂ ಅರಮನೆಯ ದೊಡ್ಡ ದ್ವಾರದ (ಜಯಮಾರ್ತಾಂಡ ದ್ವಾರ) ರೂಪದಲ್ಲಿ ಅಜರಾಮರನಾಗಿದ್ದಾನೆ. ಆನಂತರ ವಿಜಯಬಹದ್ದೂರ್, ರಾಮಪ್ರಸಾದ್, ನಂಜುಂಡ, ಐರಾವತ, ಮೋತಿಲಾಲ್, ರಾಜೇಂದ್ರ, ಬಿಳಿಗಿರಿ, ದ್ರೋಣ, ಬಲರಾಮ, ಅರ್ಜುನನ ನಂತರ ಅಭಿಮನ್ಯು ಈ ಸ್ಥಾನ ಅಲಂಕರಿಸಿದ್ದಾನೆ.

Captain Elephant Arjuna

ಕೆಲ ಆನೆಗಳ ಅಕಾಲಿಕ ಮರಣ

ಇನ್ನು ದಸರೆಯಲ್ಲಿ ಪಾಲ್ಗೊಂಡು ವಿಶ್ವವಿಖ್ಯಾತಿಯಾಗಿದ್ದ ಆನೆಗಳ ಪೈಕಿ ಕೆಲ ಆನೆಗಳು ಅಕಾಲಿಕ ಮರಣಕ್ಕೆ ತುತ್ತಾಗಿ ಕಹಿ ಸುದ್ದಿ ನೀಡಿದ ಘಟನೆಗಳೂ ನಮ್ಮ ಕಣ್ಣಮುಂದಿವೆ. ಹೌದು. ಈ ಹಿಂದೆ ದ್ರೋಣ ಆನೆ ವಿದ್ಯುತ್‌ ದುರಂತದಿಂದ ಸಾವನ್ನಪ್ಪಿತ್ತು. 2023ರಲ್ಲಿ ಎಲ್ಲರ ಮನೆ ಮಾತಾಗಿದ್ದ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹಾಸನದಲ್ಲಿ ಕಾಡಾನೆ ತಿವಿತದಿಂದ ಸಾವನ್ನಪ್ಪಿತ್ತು. ಕೋಟ್ಯಂತರ ಅಭಿಮಾನಿಗಳು ಅರ್ಜುನನ್ನ ನೆನೆದು ಕಣ್ಣೀರಿಟ್ಟಿದ್ದರು. ಇದೀಗ ಸರ್ಕಾರ ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯನ್ನೂ ಘೋಷಣೆ ಮಾಡಿದೆ. ಇದಕ್ಕೆ ಒಂದು ವರ್ಷದ ಮುನ್ನವೇ ಅಂಬಾರಿ ಹೊರುವ ಆನೆಗಳ ಸಾಲಿನಲ್ಲಿದ್ದ ಗೋಪಾಲಕೃಷ್ಣ ಆನೆಯೂ ಅಯ್ಯಪ್ಪ ಎಂಬ ಆನೆ ಜೊತೆಗೆ ಕಾದಾಟ ನಡೆಸಿ ಸಾವನ್ನಪ್ಪಿತ್ತು. ದಸರೆ, ಗಜಪಯಣ ಬಂತೆಂದರೆ, ಆನೆ ಪ್ರಿಯರಿಗೆ ಇದು ಮರೆಯಲಾಗದ ಕಹಿ ಘಟನೆ.

elephant gopalaswamy

ಅಭಿಮನ್ಯು ನಂತರದ ಯಜಮಾನ ಯಾರು?

ದಸರಾ ಪ್ರತಿ ವರ್ಷದ ನಾಡ ಹಬ್ಬ. ಮೈಸೂರು ದಸರಾವೆಂದರೆ ಅದು ಜಂಬೂ ಸವಾರಿಯೂ ಹೌದು. ಅಭಿಮನ್ಯು ನಿವೃತ್ತಿ ನಂತರ ಹಳೆ ತಲೆಮಾರಿನ ಆನೆಗಳ ಕೊಂಡಿ ಮುಗಿಯಲಿದೆ. ಬಳಿಕ ಹೊಸ ತಲೆಮಾರಿನ ಆನೆಗಳದ್ದೇ ಕಾಲ. 2026ರ ನಂತರ ಹೊಸ ಕ್ಯಾಪ್ಟನ್ ಬೇಕೇ ಬೇಕು. ಇದಕ್ಕಾಗಿ ಈಗಿನಿಂದಲೇ ಅರಣ್ಯ ಇಲಾಖೆ ತಯಾರಿಯನ್ನೂ ಮಾಡಿಕೊಂಡಿದೆ. ದಶಕದ ಹಿಂದೆಯಷ್ಟೆ ಸೆರೆ ಸಿಕ್ಕು ನಾಲೈದು ವರ್ಷದಿಂದ ದಸರಾಕ್ಕೆ ಬರುತ್ತಿರುವ ಆನೆಗಳಿಗೂ ಅಂಬಾರಿ ಹೊರುವ ಅವಕಾಶ ಸಿಗಲಿದೆ. ಇದರಲ್ಲಿ ಧನಂಜಯ, ಮಹೇಂದ್ರ, ಭೀಮಾ, ಗೋಪಿ, ಪ್ರಶಾಂತ, ಏಕಲವ್ಯ ಆನೆಗಳಿವೆ. ಇವುಗಳಲ್ಲಿ ಧನಂಜಯ ಇಲ್ಲವೇ ಮಹೇಂದ್ರಗೆ ಮುಂದಿನ ಅವಕಾಶ ಸಿಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಅರಣ್ಯಾಧಿಕಾರಿಗಳು.

ಅಂಬಾರಿ ಆನೆಗಳ ಸಿನಿಮಾ ನಂಟು

ಹಲವು ಆನೆಗಳು ಅಂಬಾರಿ ಹೊತ್ತು ಹೆಸರುವಾಸಿಯಾಗಿವೆ. ಅಲ್ಲದೇ ಸಿನಿಮಾ ನಂಟನ್ನು ಹೊಂದಿರುವುದು ವಿಶೇಷ. ಹೌದು. ಐರಾವತ ಆನೆಯಂತು ಹಾಲಿವುಡ್‌ ಸಿನಿಮಾದಲ್ಲೇ ನಟಿಸಿ ಸೈ ಎನಿಸಿಕೊಂಡಿದೆ. 1935ರಲ್ಲಿ ತೆರೆ ಕಂಡ ʻದಿ ಎಲಿಫೆಂಟ್‌ ಬಾಯ್‌ʼ ಅನ್ನೋ ಚಿತ್ರದಲ್ಲಿ ನಟಿಸಿದ್ದ. ಇನ್ನೂ ಅಣ್ಣಾವ್ರ ಸೂಪರ್‌ ಹಿಟ್‌ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ರಾಜೇಂದ್ರ ಆನೆ. ಅಣ್ಣಾವ್ರ ಗಂಧದ ಗುಡಿ ಸಿನಿಮಾ ನೋಡುವಾಗೆಲ್ಲ ರಾಜೇಂದ್ರ ಕಣ್ಮುಂದೆ ಬರುತ್ತಾನೆ. ಇನ್ನೂ ಅಭಿಮನ್ಯು ಕೂಡ ವಿಶೇಷ ಸಾಕ್ಷ್ಯಚಿತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾನೆ. ದ್ರೋಣ ಆನೆಯೂ ಸ್ಟೋರ್ಡ್‌ ಆಫ್‌ ಟಿಪ್ಪು ಸುಲ್ತಾನ್‌ ಧಾರಾವಾಹಿಯಲ್ಲಿ ಕಾಣಿಸಿಕೊಂಡಿತ್ತು.

ಹೀಗೆ ಮೈಸೂರು ದಸರಾದ ಮುಕುಟ ಮಣಿಗಳಂತೆ ಕಾಣಿಸಿಕೊಳ್ಳುವ ದಸರಾ ಆನೆಗಳ ಇತಿಹಾಸ ಅವಿಸ್ಮರಣೀಯವಾಗಿದೆ. ಆದ್ರೆ ಅಭಿಮನ್ಯು ನಂತರ ಯಾರಾಗಲಿದ್ದಾರೆ ಅಂಬಾರಿಯ ಸಾರಥಿ ಅನ್ನೋದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಮೋಹನ ಬನ್ನಿಕುಪ್ಪೆ

TAGGED:Abhimanyu elephantdasara elephantsMysore Palacemysuru dasaraಅಭಿಮನ್ಯು ಆನೆದಸರಾ ಆನೆದಸರಾ ಆನೆಗಳುಮೈಸೂರು ಅರಮನೆಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
5 minutes ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
54 minutes ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
1 hour ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
2 hours ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
2 hours ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?