– ಬಿಸಿಯೂಟದಲ್ಲಿ ಹುಳ ಪತ್ತೆ ಕೇಸ್ – ʻಪಬ್ಲಿಕ್ʼ ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು
ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಅವ್ಯವಸ್ಥೆ (Rani Chennamma Residential School) ವಿಚಾರ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಅಧಿಕಾರಿಗಳು ವಸತಿ ಶಾಲೆಯ (Poor quality food) ಪ್ರಿನ್ಸಿಪಾಲ್ ಹಾಗೂ ವಾರ್ಡನ್ನನ್ನು ಅಮಾನತುಗೊಳಿಸಲು ಸೂಚನೆ ನೀಡಿದ್ದಾರೆ.
ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ, ಅಧಿಕಾರಿಗಳ ತಂಡ ಭೇಟಿ ನೀಡಿ ವಸತಿ ಶಾಲೆಯ ಕರ್ಮಕಾಂಡವನ್ನು ಪರಿಶೀಲಿಸಿದೆ. ಈ ಘಟನೆ ಸಂಬಂಧ ಪ್ರಿನ್ಸಿಪಾಲ್ ರಾಮಣ್ಣ ಹಾಗೂ ವಾರ್ಡನ್ ಮಹಾದೇವಿ ಕಾಡೆ ಅವರನ್ನು ಅಮಾನುತುಗೊಳಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಅಪೌಷ್ಟಿಕ ಆಹಾರ ನೀಡಿರುವುದು ಬೆಳಕಿಗೆ ಬಂದಿದೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿದ್ದು, ಶಾಲೆಯ ಆವರಣದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಅಧಿಕಾರಿಗಳು ಗಮನಿಸಿದ್ದಾರೆ. ಸರಿಯಾದ ಪೌಷ್ಟಿಕ ಆಹಾರವಿಲ್ಲದೆ ವಿಧ್ಯಾರ್ಥಿಗಳ ಆರೋಗ್ಯ ಕೆಡುತ್ತಿದ್ದು, ಹೊಟ್ಟೆಗೆ ಊಟವಿಲ್ಲದೆ ವಿಧ್ಯಾರ್ಥಿಗಳು ಖಾಲಿ ಹೊಟ್ಟೆಯಲ್ಲಿ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ.ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಇದನ್ನೂ ಓದಿ: ಶೂ, ಸಾಕ್ಸ್ ವಿತರಣೆಗಾಗಿ ಮನವಿ ನೀಡಲು ಬಂದವರ ಮೇಲೆ ಸಚಿವ ಮಧು ಬಂಗಾರಪ್ಪ ದರ್ಪ? – ವಿಡಿಯೋ ವೈರಲ್!
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (KREIS) ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ಬೆಂಗಳೂರು ನಗರ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ನೇತೃತ್ವದ ತಂಡ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ತಕ್ಷಣವೇ ಗುಣಮಟ್ಟದ ಪೌಷ್ಟಿಕ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಔತಣಕೂಟಕ್ಕೆ ಬಿಜೆಪಿ ಶಾಸಕರು ಹೋಗಬಾರದು ಅಂದಿದ್ದರೆ ಮೊದಲೇ ಹೇಳಬೇಕಿತ್ತು: ರೆಡ್ಡಿ ಅಸಮಾಧಾನ
