ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಈ ಕುರಿತು `ಪಬ್ಲಿಕ್ ಟಿವಿ’ (PUBLIC TV) ವರದಿ ಬಿತ್ತರಿಸಿದ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ವಾರ ಜಿಲ್ಲೆಯ ರಿಮ್ಸ್ (RIMS) ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದರು. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿತ್ತು. ಈ ಕುರಿತು `ಪಬ್ಲಿಕ್ ಟಿವಿ’ ಸುದ್ದಿಯೊಂದನ್ನು ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.ಇದನ್ನೂ ಓದಿ: ತವರಿಗೆ ಮರಳಿದ ವಿಶ್ವ ಚೆಸ್ ಚಾಂಪಿಯನ್ – ಗುಕೇಶ್‌ಗೆ ಚೆನ್ನೈನಲ್ಲಿ ಭರ್ಜರಿ ಸ್ವಾಗತ
Advertisement
Advertisement
ರಾಯಚೂರು (Raichuru) ತಾಲೂಕಿನ ಮಾಟಮಾರಿ (Matamari) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ನಿತೀಶ್ ತಂಡ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟ ಆರೋಪದ ಹಿನ್ನೆಲೆ ದಿಢೀರ್ ಭೇಟಿ ನೀಡಲಾಗಿದೆ. ಮೃತ ಬಾಣಂತಿ 32 ವರ್ಷದ ಈಶ್ವರಿ ಮಾಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಮಾಡಿಸಿಕೊಂಡಿಸಿದ್ದರು. ಬಳಿಕ ಮನೆಗೆ ತೆರಳಿದ್ದ ಅವರು, ಆರೋಗ್ಯ ಸಮಸ್ಯೆಯಿಂದಾಗಿ ಮತ್ತೆ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಆದರೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ರಿಮ್ಸ್ ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.
Advertisement
ರಾಯಚೂರು ಜಿಲ್ಲಾಧಿಕಾರಿ ಕೆ.ನಿತೀಶ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಹಾಗೂ ಡಿಎಚ್‌ಓ ಡಾ. ಸುರೇಂದ್ರಬಾಬು ಭೇಟಿ ವೇಳೆ ಆರೋಗ್ಯ ಸಿಬ್ಬಂದಿ ತರಾಟೆಗೆ ತೆಗೆದುಕೊಂಡರು. ಆರೋಗ್ಯ ಕೇಂದ್ರದ ಸೇವೆಗಳ ಬಗ್ಗೆ ರೋಗಿಗಳಿಂದಲೂ ಮಾಹಿತಿ ಪಡೆದರು.ಇದನ್ನೂ ಓದಿ: ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ- ಮಾಸ್ ಲೀಡರ್‌ಗೆ ಕೈ ಜೋಡಿಸಿದ ’ಗೂಗ್ಲಿ’ ಡೈರೆಕ್ಟರ್