ಕೋಲಾರ: ಕೃಷಿ ಹೊಂಡದಂತಿದ್ದ ರಸ್ತೆಗೆ ಡಾಂಬರೀಕರಣ ಭಾಗ್ಯ ಒದಗಿ ಬಂದಿದ್ದು, ಪಬ್ಲಿಕ್ ಟಿವಿ (PUBLiC TV) ವರದಿಯನ್ನು ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ಒಂದು ವರ್ಷದಿಂದ ಕೋಲಾರ-ಬೇತಮಂಗಲ (Kolar-Betamangala) ಮುಖ್ಯರಸ್ತೆಗೆ ಡಾಂಬರು ಇಲ್ಲದೇ ಜನರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಈ ಸಮಸ್ಯೆಯ ಕುರಿತು ಪಬ್ಲಿಕ್ ಟಿವಿ ಸುದ್ದಿಯನ್ನು ಬಿತ್ತರಿಸಿತ್ತು.ಇದನ್ನೂ ಓದಿ: ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ವಯನಾಡಿನಲ್ಲಿ ಸ್ಪರ್ಧೆ – ಪಿಣರಾಯಿ ವಿಜಯನ್
ಕೋಲಾರ ಮತ್ತು ವಿಕೋಟಕ್ಕೆ ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಸಂಪೂರ್ಣ ಹಾಳಾಗಿ ಕೃಷಿ ಹೊಂಡದಂತಾಗಿತ್ತು. ರಸ್ತೆಯಲ್ಲಿ ದೊಡ್ಡ ದೊಡ್ಡ ಕಂದಕಗಳು ನಿರ್ಮಾಣವಾಗಿ ದ್ವಿಚಕ್ರ ವಾಹನಗಳು, ಕಾರು, ಬಸ್ ಸವಾರರು ಪ್ರತಿದಿನ ಈ ರಸ್ತೆಯಲ್ಲಿ ಓಡಾಡಲು ನರಕಯಾತನೆ ಅನುಭವಿಸುತ್ತಿದ್ದರು.
ಮಳೆ ಬಂದರೆ ರಸ್ತೆಗಳು ಕುಂಟೆಗಳಾಗಿ ಪರಿವರ್ತನೆಯಾಗುತ್ತಿತ್ತು. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ. ಇದರಿಂದ ಕಳೆದ ಅ.28 ರಂದು ಸ್ಥಳೀಯ ನಿವಾಸಿಗಳು ರಸ್ತೆ ನಿರ್ಮಾಣಕ್ಕಾಗಿ ಚಂದಾ ಪಡೆದು ಸ್ವತಃ ರಸ್ತೆ ನಿರ್ಮಿಸುವುದಾಗಿ ಅಣುಕು ಪ್ರದರ್ಶನ ಮಾಡಿ, ಸ್ಥಳೀಯ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಛೀಮಾರಿ ಹಾಕಿದರು.
ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಹತ್ತು ದಿನದಲ್ಲೇ ರಸ್ತೆ ಕಾಮಗಾರಿ ಆರಂಭವಾಗಿದೆ. ಎಚ್ಚೆತ್ತ ಅಧಿಕಾರಿಗಳು ಕಳೆದ ಹಲವು ವರ್ಷಗಳಿಂದ ಹಾಳಾಗಿದ್ದ ರಾಜ್ಯ ಹೆದ್ದಾರಿಗೆ ಡಾಂಬರೀಕರಣ ಮಾಡಿಸಿದ್ದಾರೆ. ಇದರಿಂದಾಗಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಮುಂದಿನ ವರ್ಷದ ಚುನಾವಣೆಯಲ್ಲಿ ಕೆನಡಾ ಪ್ರಧಾನಿ ಟ್ರುಡೋಗೆ ಸೋಲು : ಮಸ್ಕ್ ಭವಿಷ್ಯ