ಚಿಕ್ಕಬಳ್ಳಾಪುರ: ಕೊರೊನಾ ಎಫೆಕ್ಟ್ ನಡುವೆ ಜನಸಾಮಾನ್ಯರಿಗೆ ಉಚಿತವಾಗಿ ಅಕ್ಕಿ, ಗೋಧಿ ವಿತರಣೆ ಮಾಡುವಂತೆ ಸರ್ಕಾರ ಆದೇಶ ಮಾಡಿದೆ. ಆದರೆ ಚಿಕ್ಕಬಳ್ಳಾಪುರದ ಕೆಲ ನ್ಯಾಯಬೆಲೆ ಅಂಗಡಿಗಳ ಪ್ರಾಧಿಕರಣದಾರರು ಗ್ರಾಹಕರಿಂದ 20 ರೂಪಾಯಿ ಹಣ ವಸೂಲಿ ಮಾಡುತ್ತಿರುವುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ನಿಂದ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಮೂರು ನ್ಯಾಯಬೆಲೆ ಅಂಗಡಿಗಳ ಪ್ರಾಧಿಕಾರಣ ಅಮಾನತುಗೊಳಿಸಲಾಗಿದೆ.
Advertisement
Advertisement
ಪಬ್ಲಿಕ್ ಟಿವಿ ತಂಡ ಕೆಲ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಖುದ್ದು ಪರೀಶಿಲನೆ ನಡೆಸಿದ್ದು, ಗ್ರಾಮೀಣ ಭಾಗದಲ್ಲಿ ಸ್ಥಳೀಯರಿಂದಲೇ ಮಾಹಿತಿ ಕಲೆ ಹಾಕಲಾಗುತ್ತಿತ್ತು. ಈ ವೇಳೆ ಗೌರಿಬಿದನೂರು ತಾಲೂಕು ಇಡಗೂರು ಗ್ರಾಮದ ಯುವಕ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ನಾಗರಾಜ್ ಗ್ರಾಹಕರಿಂದ 20 ರೂಪಾಯಿಯನ್ನ ವಸೂಲಿ ಮಾಡ್ತಿರೋ ದೃಶ್ಯ ಸೆರೆಹಿಡಿದು ಪಬ್ಲಿಕ್ ಟಿವಿಗೆ ಕಳುಹಿಸಿದ್ದರು. ಈ ಸಂಬಂಧ ಪಬ್ಲಿಕ ಟಿವಿ ವೆಬ್‌ಸೈಟ್ ನಲ್ಲಿ ಸುದ್ದಿ ಪ್ರಕಟ ಮಾಡಲಾಗಿತ್ತು. ಹಣ ಪಡೆಯುತ್ತಿದ್ದ ವಿಡಿಯೋವನ್ನ ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿದೇರ್ಶಕರಿಗೆ ಕಳುಹಿಸಲಾಗಿತ್ತು. ಇದನ್ನೂ ಓದಿ: ಪಡಿತರಕ್ಕಾಗಿ ಹಣ ವಸೂಲಿ – ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ನಲ್ಲಿ ಬಯಲಾಯ್ತು ಸತ್ಯ
Advertisement
Advertisement
ಇದರಿಂದ ಎಚ್ಚೆತ್ತಾ ಉಪನಿದೇರ್ಶಕರಾದ ಸೋಮಶಂಕರಪ್ಪ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಇಡಗೂರು ಗ್ರಾಮದ ನ್ಯಾಯಬೆಲೆಯ ಪ್ರಾಧಿಕಾರಣವನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಇದೇ ರೀತಿ ಗ್ರಾಹಕರಿಂದ 20 ರಿಂದ 30 ರೂಪಾಯಿ ಹಣ ವಸೂಲಿ ಮಾಡುತ್ತಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಕೇಶವಾರ ಗ್ರಾಮದ ನ್ಯಾಯಬೆಲೆ ಅಂಗಡಿ ಹಾಗೂ ಅಜ್ಜವಾರ ಗ್ರಾಮದ ನ್ಯಾಯಬೆಲೆ ಅಂಗಡಿಯ ಪ್ರಾಧಿಕಾರಣವನ್ನು ಸಹ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಮೂರು ನ್ಯಾಯಬೆಲೆ ಅಂಗಡಿಗಳ ಪ್ರಾಧಿಕಾರಣವನ್ನ ಅಮಾನತು ಮಾಡಿ, ಪಡಿತರ ವಿತರಣೆಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಅಕ್ಕಿ ಹಾಗೂ ಗೋಧಿಗೆ ಯಾವುದೇ ಹಣ ಕೊಡಬಾರದು, ಯಾರಾದರೂ ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ಪಡೆಯುವಂತಹ ಪ್ರಕರಣಗಳ ಕಂಡುಬಂದಲ್ಲಿ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಉಪನಿದೇರ್ಶಕರು ತಿಳಿಸಿದ್ದಾರೆ.