ಚಾಮರಾಜನಗರ: ಪಬ್ಲಿಕ್ ಟಿವಿಯಲ್ಲಿ ಬಿತ್ತರವಾದ ಚಾಮರಾಜನಗರ ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯ ವರದಿಗೆ ರಾಜ್ಯ ಸರ್ಕಾರ ಎಚ್ಚೆತ್ತು ಈಗ ಉನ್ನತ ಅಧಿಕಾರಿಗಳಿಂದ ವರದಿ ಕೇಳಿದೆ.
ಬುಧವಾರ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಆಸ್ಪತ್ರೆಯ ಅವ್ಯವಸ್ಥೆ ಸುದ್ದಿಯನ್ನು ವೀಕ್ಷಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಶ್ರೀನಿವಾಸ್ ಗೌಡ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದಾರೆ.
Advertisement
ಶ್ರೀನಿವಾಸ್‍ಗೌಡ ಅವರು ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿನ ಅವ್ಯಸ್ಥೆಯ ವರದಿಯನ್ನು ಆರೋಗ್ಯ ಸಚಿವರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸುವುದಾಗಿ ಹೇಳಿದ್ದಾರೆ.
Advertisement
ರೋಗಿಗಳಿಗೆ ಮಲಗಲು ಬೆಡ್ ಮತ್ತು ಕುಳಿತುಕೊಳ್ಳಲು ಕುರ್ಚಿ ಇಲ್ಲದೆ ನೆಲದ ಮೇಲೆ ಮಲಗುವ ಮತ್ತು ಕೂರುವ ಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆಯನ್ನೂ ನೀಡುತ್ತಿಲ್ಲ. ಇದಲ್ಲದೇ ಬಾಣಂತಿಯರು ತಮ್ಮ ಮಗುವಿಗೆ ಹಾಲುಣಿಸಲು ಸ್ಥಳವಿಲ್ಲದೇ ಮೆಟ್ಟಿಲುಗಳ ಮೇಲೆ ಕುಳಿತು ಹಾಲುಣಿಸುವಂತಾಗಿತ್ತು. ಊಟ ಮಾಡಲು ಜಾಗವಿಲ್ಲದ ಕಾರಣ ರೋಗಿಗಳು ಬಾತ್ ರೂಂ ಪಕ್ಕ, ಓಡಾಡುವ ಜಾಗದಲ್ಲಿ ಕುಳಿತು ಊಟ ಮಾಡಬೇಕಾಗಿತ್ತು.
Advertisement
Advertisement
ಈ ಬಗ್ಗೆ ಸಚಿವರುಗಳಾದ ಪುಟ್ಟರಂಗಶೆಟ್ಟಿ ಹಾಗೂ ಎನ್.ಮಹೇಶ್ ಗೆ ದೂರು ನೀಡಿ ಒಂದು ವಾರ ಕಳೆದರೂ ಆಸ್ಪತ್ರೆಯತ್ತ ಯಾರೊಬ್ಬರು ಮುಖ ಮಾಡಿಲ್ಲ. ರಾಜ್ಯಕ್ಕೆ ಇಬ್ಬರು ಸಚಿವರನ್ನು ನೀಡಿರುವ ಗಡಿ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸ್ಥಿತಿ ಚಿಂತಜನಕವಾಗಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.