ಮಡಿಕೇರಿ: ನಗರದ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ (Raja Seat Glass Bridge) ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇತ್ತೀಚೆಗೆ ರಾಜಾಸೀಟ್‌ನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಗಾಜಿನ ಸೇತುವೆ ಮತ್ತು ಫುಡ್ ಕೋರ್ಟ್ ನಿರ್ಮಾಣ ಯೋಜನೆಗೆ ತೋಟಗಾರಿಕೆ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದಕ್ಕೆ ಜಿಲ್ಲೆಯ ಜನರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಸರ್ಕಾರ ಆ ಯೋಜನೆಯನ್ನು ಹಿಂಪಡೆದಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಡಿಕೇರಿ ಶಾಸಕ ಮಂಥರ್ ಗೌಡ, ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ರಾಜ್ಯ ಸರ್ಕಾರ ಹಿಂಪಡೆದಿದೆ. ಗ್ಲಾಸ್ ಬ್ರಿಡ್ಜ್‌ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ರದ್ದು ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮುಸುಕುದಾರಿಯ ಮಂಪರು ಪರೀಕ್ಷೆ ಮಾಡಿ : ಕೈ ಶಾಸಕ ಸವದಿ ಒತ್ತಾಯ
ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಯೋಜನೆಯ ಅಪಾಯಗಳ ಬಗ್ಗೆ ಪಬ್ಲಿಕ್ ಟಿವಿ ಕೆಲ ದಿನಗಳ ಹಿಂದೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಕೊಡಗು (Kodagu) ಜಿಲ್ಲಾಡಳಿತದಿಂದ ಯೋಜನೆ ರದ್ದು ಮಾಡಲಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ ಕರೆಯುವ ಮೊದಲು ಅಲ್ಲಿಗೆ ಭೂ ವಿಜ್ಞಾನಿಗಳನ್ನ, ಪರಿಸರ ಇಲಾಖೆ ತಜ್ಞರನ್ನ ಕರೆಸಿ ವಿವಿಧ ಪರೀಕ್ಷೆಗಳನ್ನು ಮಾಡಬೇಕಿತ್ತು. ಗ್ಲಾಸ್ ಬ್ರಿಡ್ಜ್ ನಿರ್ಮಾಣ ಮಾಡಲು ಈ ಜಾಗ ಸುರಕ್ಷಿತವಾಗಿದೆಯಾ ಎಂದು ಚೆಕ್ ಮಾಡಬೇಕಿತ್ತು. ಆದರೆ ಯಾವುದನ್ನೂ ಮಾಡದೆ ತೋಟಗಾರಿಕಾ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಮಾಜಿ ಸಚಿವ ಎಂಸಿ ನಾಣಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಯೋಜನೆಯನ್ನು ಕೈಬಿಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: Bengaluru | ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ ಮಾಜಿ ಬಾಯ್‌ಫ್ರೆಂಡ್