ವಿಜಯಪುರ: ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಜಿಲ್ಲೆಯ ಎಪಿಎಂಸಿ (APMC) ಪೊಲೀಸರು ಬಂಧಿಸಿದ್ದಾರೆ.
ವಿಜಯಪುರದ (Vijayapura) ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ `ಪಬ್ಲಿಕ್ ಟಿವಿ’ ಸುದ್ದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೆ ಆರೋಪಿ ಖೇಮು ರಾಠೋಡ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.ಇದನ್ನೂ ಓದಿ: ಮೊದಲು ಕಾಂಗ್ರೆಸ್ ಶಾಸಕರನ್ನ ಉಳಿಸಿಕೊಳ್ಳಲಿ: ಎಂ.ಬಿ ಪಾಟೀಲ್‌ಗೆ ವಿಜಯೇಂದ್ರ ಟಕ್ಕರ್
Advertisement
Advertisement
ಈ ಕುರಿತು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದೇವೆ. ಆದಷ್ಟು ಬೇಗ ಅವರನ್ನ ಬಂಧಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಬಿಎನ್‌ಎಸ್ ಸೆಕ್ಷನ್ 109ರ ಅಡಿಯಲ್ಲಿ (ಕೊಲೆಗೆ ಯತ್ನ) ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಘಟನೆ ಏನು?
ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದಿತ್ತು.
Advertisement
ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ನಿವಾಸಿಗಳಾದ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬ ಕಾರ್ಮಿಕರ ಮೇಲೆ ಖೇಮು ರಾಠೋಡ ಹಾಗೂ ಸಂಬಂಧಿಕರು ಮನಬಂದಂತೆ ಹಲ್ಲೆ ನಡೆಸಿದ್ದರು. ಸದ್ಯ ಕಾರ್ಮಿಕರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಲೀಕ ಪ್ರತಿದಿನ ಕಾರ್ಮಿಕರಿಗೆ 600 ರೂ. ಕೂಲಿ ನೀಡಲಾಗುತ್ತಿತ್ತು. ಕಳೆದ ಸಂಕ್ರಮಣದಂದು ಮನೆಗೆ ತೆರಳಿದ್ದ ಕಾರ್ಮಿಕರು ಮರಳಿ 16 ರಂದು ಇಟ್ಟಿಗೆ ಭಟ್ಟಿಗೆ ಬಂದಿದ್ದರು. ಬಂದ ಕಾರ್ಮಿಕರು ತಮ್ಮ ಸಾಮಾನುಗಳನ್ನು ಕೊಂಡೊಯ್ಯಲು ಮುಂದಾಗುತ್ತಿದ್ದರು.
ಈ ವಿಚಾರ ತಿಳಿದ ಮಾಲೀಕ ಬೇರೆ ಕಡೆ ಕೆಲಸಕ್ಕೆ ಹೋಗುತ್ತಿರುವುದು ಯಾಕೆ ಎಂದು ಹೇಳಿ ತನ್ನ ಜನರನ್ನು ಕರೆಸಿ ಹಲ್ಲೆ ಮಾಡಿಸಿದ್ದ. ಮೂರು ದಿನ ಕೂಡಿ ಹಾಕಿ ಪೈಪ್‌ನಿಂದ ಬೆನ್ನು, ಕಾಲು, ಸೊಂಟದ ಮೇಲೆ ಮನಬಂದಂತೆ ಥಳಿಸಿದ್ದರು.ಇದನ್ನೂ ಓದಿ: ನನ್ನನ್ನು ಟಾರ್ಗೆಟ್ ಮಾಡೋರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಯತ್ನಾಳ್‌ಗೆ ವಿಜಯೇಂದ್ರ ತಿರುಗೇಟು