Connect with us

Chamarajanagar

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ

Published

on

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗುವನ್ನು ನೆಲದ ಮೇಲೆ ಮಲಗಿಸಿದ್ದ ಪ್ರಕರಣದ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಣಂತಿ ಹಾಗೂ ನವಜಾತ ಶಿಶುವನ್ನು ನೆಲದ ಮೇಲೆ ಮಲಗಿಸಿದ್ದ ಬಗ್ಗೆ ಇಂದು ಬೆಳಗ್ಗೆ ನಿಮ್ಮ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಎರಡು ಗಂಟೆಯೊಳಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಬೆಡ್ ಗಳ ಕೊರೆತೆ ಎದುರಾಗಿದೆ. ಆಸ್ಪತ್ರೆ ಮೇಲ್ಭಾಗದಲ್ಲಿ ನಾಲ್ಕುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್ಚುವರಿ ವಾರ್ಡ್ ಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಅಲ್ಲದೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಈಗಾಗಲೇ ಶಂಕುಸ್ಥಾಪನೆ ಮಾಡಲಾಗಿದ್ದು, ಈ ಆಸ್ಪತ್ರೆ ನಿರ್ಮಾಣ ನಂತರ ಸಮಸ್ಯೆ ಬಗೆಹರಿಯಲಿದೆ ಎಂದರು.

ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಚಿಕ್ಕಹೊಳೆಯ ಜಯಲಕ್ಷ್ಮಿ ಅವರಿಗೆ ಹೆರಿಗೆ ಆಗಿ ಕೆಲ ನಿಮಿಷಗಳಲ್ಲಿ ಆಸ್ಪತ್ರೆಯಲ್ಲಿ ಹಾಸಿಗೆ ಇಲ್ಲ ಎಂಬ ಕಾರಣಕ್ಕೆ ತಾಯಿ ಹಾಗೂ ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ನೆಲದ ಮೇಲೆ ಮಲಗಿಸಿದ್ದರು. ನೆಲದ ಮೇಲೆ ಚಾಪೆ ಹಾಸಿ ಬಾಣಂತಿ ಹಾಗೂ ಎಳೆ ಕಂದಮ್ಮನನ್ನು ಮಲಗಿಸಲಾಗಿತ್ತು. ಈ ವೇಳೆ ಬಾಣಂತಿಯ ಪೋಷಕರು ತಮ್ಮ ಮನೆಯಿಂದ ತಂದಿದ್ದ ಬೆಟ್ ಶೀಟನ್ನು ತಾಯಿ-ಮಗುವಿಗೆ ಹೊದಿಕೆಯ ರೂಪದಲ್ಲಿ ಹಾಕಿದ್ದರು.

ಆಸ್ಪತ್ರೆಯ ಸಿಬ್ಬಂದಿ ಬಾಣಂತಿ ಹಾಗೂ ಮಗುವಿನ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಚಾಪೆಯ ಮೇಲೆ ಹಾಸಿಗೆ ಹಾಸಿಕೊಡುವ ಸೌಜನ್ಯಕ್ಕೂ ಮುಂದಾಗಿಲ್ಲ. ಹೀಗಾಗಿ ಬಾಣಂತಿ ಹಾಗೂ ಮಗು ಚಳಿಯಲ್ಲಿ ನಡುಗುತ್ತಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Click to comment

Leave a Reply

Your email address will not be published. Required fields are marked *