– 3 ದಿನದಲ್ಲಿ ಸಮಸ್ಯೆಗೆ ಪರಿಹಾರ ಅಂದ್ರು ಸುರೇಶ್‍ಕುಮಾರ್
– ಇದು ಪಬ್ಲಿಕ್ ಟಿವಿ ಇಂಪ್ಯಾಕ್ಟ್
ಚಿಕ್ಕಮಗಳೂರು: ಒಂದೇ ರೂಮಿನೊಳಗೆ ನಾಲ್ಕು ದಿಕ್ಕಿಗೆ ನಿಂತು ನಾಲ್ಕು ಟೀಚರ್ ಪಾಠ ಮಾಡುತ್ತಿರುವ ಸುದ್ದಿಯನ್ನು ಪಬ್ಲಿಕ್ ಟಿವಿ ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಸುರೇಶ್ ಕುಮಾರ್ ಅವರು ಸುದ್ದಿ ನೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು ಹೇಳಿದ್ದರು. ಸದ್ಯ ಸುರೇಶ್ ಕುಮಾರ್ 
ಪೋಸ್ಟ್ ನಲ್ಲಿ ಏನಿದೆ?
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿ ಬಸವನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಸಮಸ್ಯೆ ಮೂರು ದಿನದಲ್ಲಿ ಬಗೆಹರಿಯುವುದು. ಒಂದೇ ಕೊಠಡಿಯಲ್ಲಿ ಮೂರು ತರಗತಿಗಳನ್ನು ನಡೆಸುತ್ತಿರುವ ಕಡೂರು ತಾಲೂಕಿನ ಬಸವನಹಳ್ಳಿ ಸರ್ಕಾರಿ ಶಾಲೆಯ ಸಮಸ್ಯೆ ಇನ್ನು ಒಂದು ವಾರದಲ್ಲಿ ಬಗೆಹರಿಯಲಿದೆ.
ಶನಿವಾರ ಮಾಧ್ಯಮಗಳ ಮೂಲಕ ಈ ಸಮಸ್ಯೆ ಗಮನಕ್ಕೆ ಬಂದಿತ್ತು. ಈ ಶಾಲೆಗೆ ಭಾನುವಾರ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿದ್ದು, ಈ ಶಾಲೆಯಲ್ಲಿರುವ ಐದು ಕೊಠಡಿಗಳ ಪೈಕಿ ಕಳೆದ ಮಳೆಗಾಲದ ಸಂದರ್ಭದಲ್ಲಿ ಹಾನಿಗೊಳಗಾದ ಎರಡು ಕೊಠಡಿಗಳ ಹೆಂಚುಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದ್ದು ಒಂದು ವಾರದಲ್ಲಿ ಈ ಕೆಲಸ ಪೂರೈಸಲು ನಿರ್ದೇಶನ ನೀಡಲಾಗಿದೆ. ಇದನ್ನೂ ಓದಿ: ಗಡಿಗ್ರಾಮ ಗೋಪಿನಾಥಂ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಿದ ಸಚಿವ ಸುರೇಶ್ ಕುಮಾರ್
ಕಡೂರು ತಾಲೂಕಿನ ಕೆ.ಬಿದರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿ.ಬಸವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ 2007ರವರಗೆ ಕಿರಿಯ ಸರ್ಕಾರಿ ಪ್ರಾಥಮಿಕ ಶಾಲೆಯಾಗಿತ್ತು. ಸರ್ಕಾರ ಈ ಶಾಲೆಯನ್ನು 2008ರಲ್ಲಿ ಹಿರಿಯ ಪ್ರಾಥಮಿಕ ಶಾಲೆ ಎಂದು ಮೇಲ್ದರ್ಜೆಗೇರಿಸಿತ್ತು. ಆದ್ರೆ ಶಾಲೆಗೆ ಕೊಡಬೇಕಾದ ಮೂಲಭೂತ ಸೌಕರ್ಯವನ್ನು ಕೊಟ್ಟೇ ಇಲ್ಲ. ಅಂದು ಇದ್ದ ಐದೇ ಕೊಠಡಿಯಲ್ಲಿ ಪಾಠ-ಪ್ರವಚನ ನಡೆಯುತ್ತಿತ್ತು. ಮಳೆ-ಗಾಳಿಗೆ ಎರಡು ಕೊಠಡಿಗಳು ಹಾಳಾಗಿದ್ದು ಅಲ್ಲಿ ಮಕ್ಕಳನ್ನು ಕೂರಿಸ್ತಿಲ್ಲ. ಉಳಿದ ಮೂರು ಕೊಠಡಿಯಲ್ಲಿ ಒಂದರಲ್ಲಿ 1ನೇ ತರಗತಿಯಿಂದ 4ನೇ ತರಗತಿ ಮಕ್ಕಳು. ಮತ್ತೊಂದರಲ್ಲಿ ಐದನೇ ತರಗತಿಯಿಂದ 6 ನೇ ತತರಗತಿ ಮಕ್ಕಳು. ಮುಖ್ಯ ಶಿಕ್ಷಕರ ಕೊಠಡಿಯಲ್ಲಿ ಏಳನೇ ತರಗತಿ ಮಕ್ಕಳು. ಹೆಡ್ ಮಾಸ್ಟ್ರು ಮೀಟಿಂಗ್ ಅಂದ್ರೆ ಆ ಮಕ್ಕಳು ಹೊರಗೆ ಹೋಗಬೇಕಾಗುತ್ತದೆ. ಇದೇ ರೀತಿ ಮೂರು ವರ್ಷದಿಂದ ನಡೆದುಕೊಂಡು ಬಂದಿದೆ.


