– ಕ್ರಮಕ್ಕೆ ಮುಂದಾದ ಸಚಿವೆ
ಬೆಂಗಳೂರು: ಅಂಗನವಾಡಿ (Anganawadi) ಮಕ್ಕಳು ಹಾಗೂ ಗರ್ಭಿಣಿಯರಿಗೆ (Pregnant) ಕೊಡುವ ಮೊಟ್ಟೆ (Egg) ಖರೀದಿ ಹಾಗೂ ಗ್ಯಾಸ್ (Gas) ಖರೀದಿ ದುಡ್ಡು ಕೊಡದೇ ಸತಾಯಿಸುತ್ತಿದ್ದಾರೆ ಎಂಬುದರ ಕುರಿತು ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರಗೊಂಡಿತ್ತು. ಈ ವರದಿ ಬೆನ್ನಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಎಚ್ಚೆತ್ತುಕೊಂಡಿದ್ದಾರೆ.
ಪಬ್ಲಿಕ್ ವರದಿ ಬೆನ್ನಲ್ಲೇ ಕ್ರಮಕ್ಕೆ ಮುಂದಾದ ಸಚಿವೆ, ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಕ್ರಮಕ್ಕೆ ಸೂಚನೆ ನೀಡುತ್ತೇನೆ ಎಂದರು. 10 ದಿನದೊಳಗೆ ಅಂಗನವಾಡಿಗಳಿಗೆ ಹಣ ಬಿಡುಗಡೆ ಮಾಡುವುದಾಗಿ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದರಾಮಣ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಾಲ್ಕು ವರ್ಷದಿಂದ ಒಂದು ಸಾವಿರ ಆಯಾ ಹಾಗೂ 440 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈಗಾಗಲೇ 13 ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿದಿದೆ. ಇದರ ಬಗ್ಗೆ ಮಾಹಿತಿ ಪಡೆದು ಕ್ರಮಕ್ಕೆ ಸೂಚನೆ ನೀಡುತ್ತೇನೆ. ಹಣಕಾಸು ಬಿಡುಗಡೆ ವಿಚಾರದಲ್ಲಿ ಯಾವಾಗಲೂ ನನ್ನ ಮತ್ತು ಫೈನಾನ್ಸ್ ಡಿಪಾರ್ಟ್ಮೆಂಟ್ ನಡುವೆ ಒಂದು ತರಹ ಕಾಂಪಿಟೇಶನ್ ಇದ್ದೇ ಇರುತ್ತದೆ ಎಂದು ಅವರು ಹೇಳಿದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
