ಮಡಿಕೇರಿ: ಗುರುವಾರ ಪಬ್ಲಿಕ್ ಟಿವಿ ವೆಬ್‍ನಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆಯಲ್ಲಿ ಉಪಯೋಗಕ್ಕೆ ಬಾರದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ ಎಂದು ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಸರಿಪಡಿಸಲು ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮುಂದಾಗಿದ್ದಾರೆ.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಿಂದಲೂ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ ಎಂದು ಗುರುವಾರ ಪಬ್ಲಿಕ್ ಟಿವಿ ವೆಬ್‍ಸೈಟ್‍ನಲ್ಲಿ ವರದಿಯಾಗಿತ್ತು. ಅಲ್ಲದೆ ಕೊಡಗಿನ ಅನೇಕ ವಾಟ್ಸಾಪ್ ಗ್ರೂಪ್ ನಲ್ಲಿ ಚರ್ಚೆ ಆಗಿತ್ತು. ಇದನ್ನೂ ಓದಿ: ಕೂಡಿಗೆಯಲ್ಲಿ ನೀರಿನ ಘಟಕವಿದ್ರೂ ಪ್ರಯೋಜನವಿಲ್ಲ – ಮೂರು ತಿಂಗಳಿಂದ ಜನರ ಪರದಾಟ
ಈ ವರದಿಯಿಂದ ಎಚ್ಚೇತ್ತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಪಡಿಸುತ್ತಿದ್ದಾರೆ. ಏನೇ ಆಗಲಿ ಈ ವ್ಯಾಪ್ತಿಯ ಗ್ರಾಹಕರು ಕಾರ್ಡನ್ನು ಗ್ರಾಮ ಪಂಚಾಯಿತಿಗೆ ಹಿಂತಿರುಗಿಸಲು ನಿರ್ಧರಿಸಿದರು. ಆದರೆ ಗುರುವಾರ ವರದಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಪಡಿಸಲು ಮುಂದಾಗಿದ್ದಾರೆ.
ಸದ್ಯ ಪಬ್ಲಿಕ್ ಟಿವಿ ವರದಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.