ಧಾರವಾಡ: ನಲ್ಲಿಯಲ್ಲಿ ರಕ್ತ ಮಿಶ್ರಿತ ನೀರು ಬರುತ್ತಿರುವ ಸುದ್ದಿ ಪಬ್ಲಿಕ್ ಟಿವಿ ಪ್ರಸಾರವಾಗುತ್ತಿದ್ದಂತೆ ಸ್ಥಳಕ್ಕೆ ಜಲಮಂಡಳಿ ಹಾಗೂ ಪಾಲಿಕೆ ಅಧಿಕಾರಿಗಳು ಭೇಟಿಯಾಗಿ ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಪಬ್ಲಿಕ್ ಟಿವಿಯಲ್ಲಿ ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯ ನಲ್ಲಿಗಳಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿರುವ ಬಗ್ಗೆ ಸುದ್ದಿ ಪ್ರಸಾರವಾಗುತಿತ್ತು. ಪಬ್ಲಿಕ್ ಟಿವಿ ವರದಿ ಬರುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಜಲಮಂಡಳಿ ಹಾಗೂ ಪಾಲಿಕೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Advertisement
Advertisement
ಕಾರ್ಯನಿರ್ವಾಹಕ ಅಭಿಯಂತರ ವೆಂಕಟರಾವ್ ನೇತೃತ್ವದಲ್ಲಿ ಅಧಿಕಾರಿಗಳು ಕಾಲೋನಿಗೆ ಹೋಗಿ ನೀರು ಸರಬರಾಜು ಪೈಪ್‍ಲೈನ್ ಪರಿಶೀಲನೆ ಮಾಡಿದ್ದಾರೆ. ಕಸಾಯಿಖಾನೆಯಿಂದ ಬರುವ ನೀರನ್ನು ಬೇರೆ ಪೈಪ್‍ಲೈನ್ ಮೂಲಕ ಹೋಗುವಂತೆ ಮಾಡುತ್ತೇವೆ. ಕುಡಿಯುವ ನೀರು ಪೂರೈಕೆ ಮತ್ತು ಕಸಾಯಿ ಖಾನೆ ನೀರಿ ಪೈಪ್‍ಲೈನ್ ಸಂಪರ್ಕ ಹೊಂದದಂತೆ ಕ್ರಮ ಕೈಗೊಳ್ಳುತ್ತೇವೆ. ಸಂಜೆ ವೇಳೆಗೆ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement
ಕಳೆದ 15 ದಿನದಿಂದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಹಾಕಲಾಗಿದ್ದ ನಲ್ಲಿಯಲ್ಲಿ ರಕ್ತ ಮಿಶ್ರಿತ ನೀರು ಹೊರ ಬರುತಿತ್ತು. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನು ನೀಡಿದ್ದರು. ಆದರೆ ಸಮಸ್ಯೆಗೆ ಯಾವುದೇ ಪರಿಹಾರ ಸಿಕ್ಕಿರಲಿಲ್ಲ. ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲೀಜು ನೀರು ಕೂಡುತ್ತಿರುವುದರಿಂದ ಕುಡಿಯುವ ನೀರಿನಲ್ಲಿ ರಕ್ತದ ನೀರು ಬರುತಿತ್ತು.