ಮಡಿಕೇರಿ: ವಿದ್ಯುತ್ ಬಿಲ್ (Electricity Bill) ಬಾಕಿ ಉಳಿಸಿಕೊಂಡಿರುವ ಅಂಗನವಾಡಿಗಳ (Anganwadi) ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ಜಿಲ್ಲೆಯ ಅಧಿಕಾರಿಗಳಿಗೆ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾದ ಎನ್‌ಎಸ್ ಬೋಸರಾಜು (NS Boseraju) ಅವರು ಸೂಚನೆ ನೀಡಿದ್ದಾರೆ.
ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಅಂಗನವಾಡಿಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದೆ ಎನ್ನುವ ಪಬ್ಲಿಕ್ ಟಿವಿ (Public Tv) ವರದಿಯ ನಂತರ ಸಚಿವರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ
Advertisement
Advertisement
ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸುವಂತೆ ಸಚಿವರ ಕಾರ್ಯಾಲಯಕ್ಕೂ ಸೂಚನೆ ನೀಡಿದ್ದರು. ಸೂಚನೆಯ ಹಿನ್ನೆಲೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರಪ್ಪ ಹಂಚಿನಾಳ ಅವರು ಜಿಲ್ಲೆಯ ಅಧಿಕಾರಿಗಳು, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಮಾತನಾಡಿ ಅಂಗನವಾಡಿಗಳ ವಿದ್ಯುತ್ ಸಂಪರ್ಕವನ್ನು ಮರು ಸ್ಥಾಪಿಸಲು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಉಚಿತ ಭಾಗ್ಯದಿಂದ ಪರಿಶಿಷ್ಟರ ಅಂತ್ಯಕ್ರಿಯೆಗೂ ಸರ್ಕಾರದ ಬಳಿ ದುಡ್ಡಿಲ್ಲ: ಬಿಎಸ್‌ವೈ
Advertisement