ಹುಬ್ಬಳ್ಳಿ: ‘ಪಬ್ಲಿಕ್ ಟಿವಿ’ ಸತತ ವರದಿಗೆ ಹುಬ್ಬಳ್ಳಿ ಧಾರವಾಡ (Dharwad) ಮಹಾನಗರ ಪಾಲಿಕೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸ್ಮಶಾನದಲ್ಲಿ ನಿರ್ಮಾಣವಾಗುತ್ತಿದ್ದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಬ್ರೇಕ್ ಬಿದ್ದಿದು, ಹುಬ್ಬಳ್ಳಿ (Hubballi) ಮಂಟೂರು ರಸ್ತೆಯಲ್ಲಿನ ಸ್ಮಶಾನದಿಂದ ಮತ್ತೊಂದು ಸ್ಥಳಕ್ಕೆ ಇಂದಿರಾ ಕ್ಯಾಂಟೀನ್ ಸ್ಥಳಾಂತರಗೊಂಡಿದೆ.
ಸ್ಮಶಾನದಲ್ಲಿ ಸಾರ್ವಜನಿಕರ ವಿರೋಧದ ನಡುವೆಯೂ ರಾತ್ರೋರಾತ್ರಿ ಕಾಂಪೌಂಡ್ ಹೊಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿತ್ತು. ಈ ಕುರಿತು ಸೆ.17 ರಂದು ‘ಪಬ್ಲಿಕ್ ಟಿವಿ’ ವರದಿ ಪ್ರಸಾರ ಮಾಡಿತ್ತು. ಅಲ್ಲದೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೂ ಇಂದಿರಾ ಕ್ಯಾಂಟೀನ್ ಕಾರಣವಾಗಿತ್ತು. ಹೀಗಾಗಿ ಇದೇ ತಿಂಗಳ 26ರಂದು ಶ್ರೀರಾಮಸೇನೆ ಮತ್ತು ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಭೂಮಿಯನ್ನು 2 ತಿಂಗಳ ಕಾಲ ಸುತ್ತಲಿರುವ ಮಿನಿ ಮೂನ್! – ಏನಿದರ ವಿಶೇಷ?
ಸಾರ್ವಜನಿಕರ ಸತತ ವಿರೋಧ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ ಮೇರೆಗೆ, ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಪಾಲಿಕೆ ಮುಂದಾಗಿದೆ. ಈ ಕುರಿತು ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ