ಬೀದರ್: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಕುರಿತು `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ತಹಶೀಲ್ದಾರ್ ಶಿವಾನಂದ ಮೇತ್ರೆ ಮೃತ ಮಹಿಳೆಯ ಮನೆಗೆ ಭೇಟಿ ನೀಡಿದ್ದಾರೆ.
ಬೀದರ್ (Bidar) ಜಿಲ್ಲೆಯ ಹುಲಸೂರು (Hulsooru) ತಾಲೂಕಿನ ಗಡಿಗೌಡಗಾಂವ್ ಗ್ರಾಮದ ಮಹಿಳೆಯೊಬ್ಬರು ಮೈಕ್ರೋ ಫೈನಾನ್ಸ್ ನೀಡಿದ್ದ ಕಿರುಕುಳ ತಾಳಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು `ಪಬ್ಲಿಕ್ ಟಿವಿ’ ಸುದ್ದಿಯನ್ನು ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಮೃತ ಮಹಿಳೆಯ ಮನೆಗೆ ತಹಶೀಲ್ದಾರ್ ಶಿವಾನಂದ ಮೇತ್ರೆ ಭೇಟಿ ನೀಡಿದ್ದು, ಕೂಡಲೇ ತಪ್ಪಿಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಟ್ರಕ್, ಕಾರು ಮುಖಾಮುಖಿ ಡಿಕ್ಕಿ – ನಾಲ್ವರು ಸಾವು, ಇಬ್ಬರು ಗಂಭೀರ
ಸ್ಥಳದಲ್ಲಿಯೇ ತಹಶೀಲ್ದಾರ್ ಮೈಕ್ರೋ ಫೈನಾನ್ಸ್ ಅಧಿಕಾರಿಗಳು ಸಭೆ ಕರೆದು, ತರಾಟೆ ತೆಗೆದುಕೊಂಡಿದ್ದಾರೆ.
ಘಟನೆ ಏನು?
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಮಹಿಳೆಯನ್ನು ರೇಷ್ಮಾ ಸೂರ್ಯವಂಶಿ (25) ಎಂದು ಗುರತಿಸಲಾಗಿದೆ. ವಿವಿಧ ಸಂಘಗಳಲ್ಲಿ 3 ಲಕ್ಷ ರೂ. ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ ಹೇಗಿದೆ?