ರಾಯಚೂರಿನ ಸಾರಿಗೆ ಸಿಬ್ಬಂದಿ ಕಷ್ಟಕ್ಕೆ ಸಿಕ್ಕಿತು ಪರಿಹಾರ – ಪಬ್ಲಿಕ್ ಟಿವಿ ವರದಿಗೆ ಅಧಿಕಾರಿಗಳ ಸ್ಪಂದನೆ

Public TV
2 Min Read
rcr impact

ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದ ಅವ್ಯವಸ್ಥೆ ಹಾಗೂ ರಾತ್ರಿ ತಂಗುವ ಸಿಬ್ಬಂದಿ ನರಕಯಾತನೆ ಕುರಿತ ಪಬ್ಲಿಕ್ ಟಿವಿ ವರದಿಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸ್ಪಂದಿಸಿದೆ. ಶೀಘ್ರದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಾಗಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

ರಾಯಚೂರು ಬಸ್ ನಿಲ್ದಾಣದಲ್ಲಿ ರಾತ್ರಿ ವಸತಿ ಮಾಡುವ ಸಾರಿಗೆ ಸಿಬ್ಬಂದಿಗಳಿಗೆ ಮಲಗಲು ಸುರಕ್ಷಿತ ಸ್ಥಳವಿಲ್ಲದೇ ಬಸ್‍ನಲ್ಲಿಯೇ ಸಿಬ್ಬಂದಿ ಸೊಳ್ಳೆ ಕಾಟದಲ್ಲಿ Public Tv IMPACTಮಲಗುತ್ತಾರೆ. ಪ್ರಯಾಣಿಕರ ಟಿಕೆಟ್ ದುಡ್ಡಿಗೆ ಸುರಕ್ಷತೆಯಿಲ್ಲ. ಕುಡಿಯಲು ನೀರು, ಸ್ನಾನಕ್ಕೆ ಕೋಣೆ, ಶೌಚಾಲಯವೂ ಸರಿಯಾಗಿಲ್ಲ ಎನ್ನುವುದರ ಕುರಿತು ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿನ ರಾತ್ರಿ ವಸತಿಯ ದುಸ್ಥಿತಿ ಬಗ್ಗೆ ವಿವರಿಸಲಾಗಿತ್ತು. ಇದಕ್ಕೆ ಸ್ಪಷ್ಟಿಕರಣ ನೀಡಿರುವ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಾರಿಗೆ ಸಿಬ್ಬಂದಿ ಘಟಕಕ್ಕೆ ತೆರಳಿ ಸೌಲಭ್ಯವನ್ನು ಉಪಯೋಗಿಸಿಕೊಳ್ಳದೇ ಬಸ್ ನಿಲ್ದಾಣದಲ್ಲಿ ವಸತಿ ಮಾಡುತ್ತಿದ್ದಾರೆ ಹಾಗೂ ಕೆಲವೊಂದು ಸಿಬ್ಬಂದಿ ಬಸ್ ನಿಲ್ದಾಣದ ಮತ್ತು ಘಟಕಗಳು ಸಮೀಪವಿಲ್ಲದ ಕಾರಣದಿಂದ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಬಸ್ ನಿಲ್ದಾಣದಲ್ಲಿ ಸಿಬ್ಬಂದಿಗೆ ರೆಸ್ಟ್ ರೂಂ ಹಾಗೂ ಇತರೆ ಸೌಲಭ್ಯಗಳು ಇಲ್ಲದೇ ಇರುವುದನ್ನು ಒಪ್ಪಿಕೊಂಡಿದ್ದಾರೆ.

rcr impact

2018-19ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯ ಹೊಸ ಕಾಮಗಾರಿಗಳ ಕ್ರಿಯಾ ಯೋಜನೆ ಅಡಿಯಲ್ಲಿ ರಾಯಚೂರು ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು 75 ಲಕ್ಷ ಮಂಜೂರಾಗಿತ್ತು. ಮಂಜೂರಾದ ಮೊತ್ತದಲ್ಲಿ ಬಸ್ ನಿಲ್ದಾಣದ ಉತ್ತರ ಹಾಗೂ ದಕ್ಷಿಣ ದಿಕ್ಕಿನಲ್ಲಿ ಬಾಕಿ ಉಳಿದ ಆವರಣಕ್ಕೆ ಕಾಂಕ್ರೀಟ್, ಬಸ್ ನಿಲ್ದಾಣ ಮುಖ್ಯ ಕಟ್ಟಡದ ಮೊದಲನೇ ಅಂತಸ್ತಿನ ಎಡಭಾಗದಲ್ಲಿ ಸಿಬ್ಬಂದಿಗಳಿಗೆ ವಿಶ್ರಾಂತಿ ಗೃಹವನ್ನು ಶೌಚಾಲಯಗಳನ್ನೊಳಗೊಂಡಂತೆ ಮತ್ತು ಬಸ್ ನಿಲ್ದಾಣ ಮುಖ್ಯ ಕಟ್ಟಡಕ್ಕೆ ಸುಣ್ಣ-ಬಣ್ಣ ಹಾಗೂ ಹಾಲಿ ಇರುವ ಸೈಕಲ್ ಸ್ಟಾಂಡ್‍ನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಿದೆ ಮತ್ತು ವಿದ್ಯುತ್ ಕೆಲಸವನ್ನು ನಿರ್ವಹಿಸಲು ಯೋಜಿಸಲಾಗಿದೆ. ಆದರೆ 4 ಬಾರಿ ಟೆಂಡರ್ ಕರೆಯಲಾಗಿದ್ದು, 3 ಟೆಂಡರ್ ನಲ್ಲಿ ಗುತ್ತಿಗೆದಾರರು ಭಾಗವಹಿಸಿರುವುದಿಲ್ಲ ಕಾರಣ ಕಾಮಗಾರಿ ಕೆಲಸವನ್ನು ಕೈಗೆತ್ತಿಕೊಳ್ಳುವಲ್ಲಿ ವಿಳಂಭವಾಗಿದೆ. ಮತ್ತು 4ನೇ ಟೆಂಡರ್ ನಲ್ಲಿ ಭಾಗವಹಿಸಿದ ಗುತ್ತಿಗೆದಾರರು ಅಂತಿಮವಾಗುವ ಸಾಧ್ಯತೆಯಿದೆ. ಸದರಿ ಪಕ್ರಿಯೆ ಮುಗಿದ ನಂತರ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿಗಳಿಗೆ ವಿಶ್ರಾಂತಿ ಕೋಣೆ, ಶೌಚಾಲಯ, ಸ್ನಾನದ ಕೋಣೆ ಹಾಗೂ ಇನ್ನಿತರ ಕೆಲಸಗಳನ್ನು ಕೈಗೊಳ್ಳುವುದಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *